ಕರ್ನಾಟಕ

karnataka

ETV Bharat / state

ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹ:ಅತಿಥಿ ಉಪನ್ಯಾಸಕರ ಪ್ರತಿಭಟನೆ - protest in shimogha

ಕೊರೊನಾ ಅವಧಿಯನ್ನು ಸೇವಾ ಅವಧಿಯೆಂದು ಪರಿಗಣಿಸಿ ವೇತನ ಬಿಡುಗಡೆ ಮಾಡಬೇಕು ಹಾಗೂ ಸೇವಾ ಅವಧಿಯೆಂದು ಪರಿಗಣಿಸಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯ್ತು.

shimogha
ಅತಿಥಿ ಉಪನ್ಯಾಸಕರ ಪ್ರತಿಭಟನೆ

By

Published : Aug 18, 2020, 7:09 PM IST

ಶಿವಮೊಗ್ಗ: ಹೊಸದಾಗಿ ಹೊರಡಿಸಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಸೇವೆಯಲ್ಲಿರುವ ಅಥಿತಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಲಾಕ್​​ಡೌನ್ ಅವಧಿಯ ವೇತನವನ್ನು ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊರೊನಾ ಮಹಾಮಾರಿಯಿಂದ ಕೆಲಸವು ಇಲ್ಲದೇ ವೇತನವು ಇಲ್ಲದೇ, ಕುಟುಂಬ ನಿರ್ವಹಣೆ ಹೊರೆ ಆಗುತ್ತಿದೆ. ಹಾಗಾಗಿ ಸರ್ಕಾರ ಲಾಕ್​​ಡೌನ್ ಅವಧಿಯನ್ನು ಸೇವಾ ಅವಧಿಯೆಂದು ಪರಿಗಣಿಸಿ ವೇತನ ಬಿಡುಗಡೆ ಮಾಡಬೇಕು ,ಹಾಗೂ ಹೊಸದಾಗಿ ಕರೆದಿರುವ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಹಾಗೂ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು ಹೀಗೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಮನವಿ ಸಲ್ಲಿಸಲಾಯಿತು.

ABOUT THE AUTHOR

...view details