ಶಿವಮೊಗ್ಗ: ಸಂತೋಷ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ರಾಜೀನಾಮೆ ನೀಡಬೇಕೆಂದು ಸಚಿವ ಈಶ್ವರಪ್ಪನವರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.
ಸಚಿವ ಈಶ್ವರಪ್ಪ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮುಗಿಸಿ ವಾಪಸ್ ಆಗುವಾಗ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅದೇ ವೇಳೆ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಬಂದು ತೀವ್ರ ವಿರೋಧ ವ್ಯಕ್ತಡಿಸಿದರು. ಆಗ ಕೆಲ ಕಾಲ ಗೊಂದಲಮಯ ವಾತಾವರಣ ಉಂಟಾಗಿತ್ತು.