ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮಳೆ ಅಬ್ಬರ: ದಾವಣಗೆರೆ, ಶಿವಮೊಗ್ಗ, ಧಾರವಾಡ ಜಿಲ್ಲೆ​ಗ​ಳಲ್ಲಿ ಶಾಲೆ​ಗ​ಳಿಗೆ ರಜೆ

ರಾಜ್ಯದಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆ​ಚ್ಚ​ರಿಕಾ ಕ್ರಮ​ವಾಗಿ ದಾವಣಗೆರೆ, ಶಿವಮೊಗ್ಗ ಹಾಗೂ ಧಾರವಾಡ ಜಿಲ್ಲೆ​ಗ​ಳಲ್ಲಿ ಶುಕ್ರವಾರ ಶಾಲೆ​ಗ​ಳಿಗೆ ರಜೆ ಘೋಷಿ​ಸ​ಲಾ​ಗಿದೆ.

heavy-rain-continues-in-many-parts-of-karnataka
ರಾಜ್ಯದಲ್ಲಿ ಮಳೆ ಅಬ್ಬರ: ದಾವಣಗೆರೆ, ಶಿವಮೊಗ್ಗ ಜಿಲ್ಲೆ​ಗ​ಳಲ್ಲಿ ಶಾಲೆ​ಗ​ಳಿಗೆ ರಜೆ

By

Published : May 20, 2022, 7:59 AM IST

Updated : May 20, 2022, 9:20 AM IST

ದಾವಣಗೆರೆ/ಶಿವಮೊಗ್ಗ:ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಜನ​ಜೀ​ವನ ಸಂಪೂರ್ಣ ಅಸ್ತ​ವ್ಯ​ಸ್ತ​ಗೊಂಡಿದೆ. ದಾವಣಗೆರೆ, ಶಿವಮೊಗ್ಗ ಜಿಲ್ಲೆಗ​ಳಲ್ಲಿ ಮುನ್ನೆ​ಚ್ಚ​ರಿಕಾ ಕ್ರಮ​ವಾಗಿ ಶುಕ್ರವಾರ ಶಾಲೆ​ಗ​ಳಿಗೆ ರಜೆ ಘೋಷಿ​ಸ​ಲಾ​ಗಿ​ದೆ.

ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ 1ರಿಂದ 10ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಹಿಸಿ ರಜೆ ನೀಡಲಾಗಿದೆ. ಮಳೆಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮಕ್ಕಳಿಗೆ ಶಾಲೆಗೆ ತೆರಳಲು ತೊಂದರೆಯಾಗುತ್ತಿದೆ.

ಶಿವಮೊಗ್ಗದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ: ಜಿಲ್ಲಾದ್ಯಂತ ಇಂದೂ ಕೂಡ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಘೋಷಣೆ ಮಾಡಿದ್ದಾರೆ. ಶುಕ್ರವಾರವೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ ಕಾರಣ ರಜೆ ನೀಡಲಾಗಿದೆ. ಈಗಾಗಲೇ ಮಳೆಯಿಂದ ನಗರದ ಹಲವು ಬಡಾವಣೆಗಳಲ್ಲಿ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ ಆಯಾ ಬಡಾವಣೆಯಲ್ಲಿ ಸರ್ಕಾರಿ ಶಾಲೆಯಲ್ಲಿಯೇ ಗಂಜಿಕೇಂದ್ರ ತೆರೆಯಲಾಗಿದೆ. ಗುರುವಾರವೂ ಕೂಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿತ್ತು.

ಶಾಲೆ​ಗ​ಳಿಗೆ ರಜೆ

ಈಶ್ವರಪ್ಪ ಭೇಟಿ:ಶಿವಮೊಗ್ಗದ ನಗರದ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಕೆ.ಎಸ್ ಈಶ್ವರಪ್ಪ ಭೇಟಿ‌ ನೀಡಿ ಪರಿಶೀಲಿಸಿದ್ದಾರೆ. ಶಿವಮೊಗ್ಗದ ಬಾಪೂಜಿ ನಗರ, ವೆಂಕಟೇಶ ನಗರ ಸೇರಿದಂತೆ ವಿವಿಧಡೆ ಭೇಟಿ ನೀಡಿ ಪರಿಶೀಲಿಸಿದರು. ಸಂಜೆ ವೇಳೆಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ನಗರದ ವಿವಿಧ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸೂಕ್ತ ಕ್ರಮದ ಭರವಸೆ ನೀಡಿದರು.

ಧಾರವಾಡದಲ್ಲೂ ಶಾಲೆಗೆ ರಜೆ: ಜಿಲ್ಲೆಯಾದ್ಯಂತ ನಿರಂತರ ಮಳೆಯ ಕಾರಣ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದ ಬೆನ್ನಲ್ಲೇ ರಜೆ ನೀಡಿ ಆದೇಶಿಸಲಾಗಿದೆ. ನಿನ್ನೆ ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯಾಗಿದೆ. ಈ ಬಗ್ಗೆ ತಾಲೂಕಿನ ನೋಡಲ್ ಅಧಿಕಾರಿಗಳು ವರದಿ ಕಳಿಸುತ್ತಿದ್ದಾರೆ. ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಹಾವೇರಿಯಲ್ಲೂ ರಜೆ ಘೋಷಣೆ:ಹಾವೇರಿಯಲ್ಲೂ ಗುರುವಾರದಿಂದಲೇ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಇಂದು ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ರಜೆ ನೀಡಿ ಆದೇಶಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಸೇರಿದಂತೆ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಹಾವೇರಿ ತಾಲೂಕಿನ ದೇಸಳ್ಳಿ ಗ್ರಾಮದಲ್ಲಿ ಜಮೀನಿನಿಂದ ಹರಿದು ಬರುತ್ತಿರುವ ಮನೆಗಳಿಗೆ ನೀರು ನುಗ್ಗಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ಸುರಂಗ ಕುಸಿತ: ನಾಲ್ವರಿಗೆ ಗಾಯ, ಹಲವರು ಸಿಲುಕಿರುವ ಶಂಕೆ

Last Updated : May 20, 2022, 9:20 AM IST

ABOUT THE AUTHOR

...view details