ಶಿವಮೊಗ್ಗ:ಮಲೆನಾಡಿನಲ್ಲಿ ಮಳೆರಾಯ ಆರ್ಭಟ ಮುಂದುವರೆದಿದ್ದು, ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಕಾರರಿಪುರದಲ್ಲಿ ನಡೆದಿದೆ.
ಮಲೆನಾಡಿನಲ್ಲಿ ವರುಣನ ಅಬ್ಬರ: ವಿದ್ಯುತ್ ಕಂಬ ಬಿದ್ದು ಬೈಕ್ ಸವಾರನ ಸ್ಥಿತಿ ಗಂಭೀರ - ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ
ಮಲೆನಾಡಿನಲ್ಲಿ ವರಣ ಆರ್ಭಟ ಜೋರಾಗಿದ್ದು, ಇಂದು ಕೂಡ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಈ ವೇಳೆ ಜಿಲ್ಲೆಯ ಶಿಕಾರಿಪುರಲ್ಲಿ ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದ ಸವಾರ ಗಾಯಗೊಂಡಿರುವ ಘಟನೆ ನಡೆದಿದೆ.
![ಮಲೆನಾಡಿನಲ್ಲಿ ವರುಣನ ಅಬ್ಬರ: ವಿದ್ಯುತ್ ಕಂಬ ಬಿದ್ದು ಬೈಕ್ ಸವಾರನ ಸ್ಥಿತಿ ಗಂಭೀರ electric pole fell down on man](https://etvbharatimages.akamaized.net/etvbharat/prod-images/768-512-7242523-thumbnail-3x2-gogg.jpg)
ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಗಂಭೀರ
ಮಲೆನಾಡಿನಲ್ಲಿ ವರುಣನ ಅಬ್ಬರ
ಜಿಲ್ಲೆಯ ಶಿಕಾರಿಪುರ ತಾಲೂಕಿನ ರಾಗಿಕೊಪ್ಪದಲ್ಲಿ ಬೈಕ್ ಮೇಲೆ ಏಕಾಏಕಿ ವಿದ್ಯುತ್ ಕಂಬ ಬಿದ್ದಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ನಿನ್ನೆಯಿಂದ ಜಿಲ್ಲೆಯಾದ್ಯಂತ ಜೋರು ಗಾಳಿ ಸಹಿತ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವೆಡೆ ಗಾಳಿಗೆ ಮನೆ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಶಿಕಾರಿಪುರ, ಸಾಗರ, ತೀರ್ಥಹಳ್ಳಿ ಸೇರಿದಂತೆ ಅನೇಕ ಕಡೆ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಾಹಾಸ ಮೂಡಿಸಿದೆ.