ಶಿವಮೊಗ್ಗ :ರಾಜ್ಯದಲ್ಲಿ ಮುಂಗಾರಿನ ಆರ್ಭಟ ಜೋರಾಗ್ತಿದೆ. ಮಲೆನಾಡಲ್ಲಿ ಕಳೆದೆರಡು ದಿನದಿಂದ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಮಲೆನಾಡಿನ ವಿವಿಧ ತಾಲೂಕುಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಹೊಸನಗರ ತಾಲೂಕಿನಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 148.8 ಮಿ.ಮೀ ಮಳೆಯಾಗಿದೆ.
ಹುಲಿಕಲ್, ಮಾಸ್ತಿಕಟ್ಟೆ, ಯಡೂರು, ಸಾಗರ ತಾಲೂಕಿನ ಜೋಗ-ಕಾರ್ಗಲ್ ಭಾಗದಲ್ಲೂ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿವೆ. ಜೊತೆಗೆ ಜಲಾಶಯಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದೆ.