ಕರ್ನಾಟಕ

karnataka

ETV Bharat / state

ಆರ್ಥಿಕ ದುರ್ಬಲ ವರ್ಗಕ್ಕೆ ಮೀಸಲಾತಿ.. ಸುಪ್ರೀಂ ತೀರ್ಪು ಸ್ವಾಗತಿಸಿದ ಹೆಬ್ಬಾರ್​, ಈಶ್ವರಪ್ಪ

ಮೇಲ್ವರ್ಗದಲ್ಲಿರುವ ಆರ್ಥಿಕ ದುರ್ಬಲ ವರ್ಗದ ಜನರಿಗೆ ಶಾಲಾ ದಾಖಲಾತಿ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103 ನೇ ತಿದ್ದುಪಡಿಯನ್ನು ಸುಪ್ರೀಂಕೋರ್ಟ್​ ಎತ್ತಿ ಹಿಡಿದಿದೆ. ಕೋರ್ಟ್​ನ ಈ ತೀರ್ಪನ್ನು ಮಾಜಿ ಸಚಿವ ಈಶ್ವರಪ್ಪ ಮತ್ತು ಸಚಿವ ಶಿವರಾಮ್​ ಹೆಬ್ಬಾರ್​ ಸ್ವಾಗತಿಸಿದ್ದಾರೆ.

'ಸುಪ್ರೀಂ' ತೀರ್ಪು ಸ್ವಾಗತಿಸಿದ ಹೆಚ್ಚಾರ್​, ಈಶ್ವರಪ್ಪ
'ಸುಪ್ರೀಂ' ತೀರ್ಪು ಸ್ವಾಗತಿಸಿದ ಹೆಚ್ಚಾರ್​, ಈಶ್ವರಪ್ಪ

By

Published : Nov 7, 2022, 5:28 PM IST

Updated : Nov 7, 2022, 5:48 PM IST

ಶಿವಮೊಗ್ಗ: ಮೇಲ್ವರ್ಗದಲ್ಲಿರುವ ಜಾತಿಗಳ ಅರ್ಥಿಕ ದುರ್ಬಲ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ನೀಡುವ ಪರ ಸುಪ್ರೀಂ ಕೋರ್ಟ್ ತೀರ್ಪನ್ನು ನೀಡಿದೆ. ಇದನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸ್ವಾಗತಿಸಿದ್ದಾರೆ.

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಲ್ವರ್ಗದ ಜಾತಿಯಲ್ಲಿ ಅನೇಕರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರ ಬುದ್ಧಿವಂತಿಕೆ ಈ ದೇಶಕ್ಕೆ ಸಮಾಜಕ್ಕ ಬೇಕಾಗುತ್ತದೆ. ಬುದ್ಧಿವಂತನಿಗೆ ಮೀಸಲಾತಿ ಇಲ್ಲದೆ ಹೋದ್ರೆ, ದೇಶಕ್ಕೆ‌ ನಷ್ಟವಾಗುತ್ತದೆ. ಮೀಸಲಾತಿ ನೀಡುವುದರಿಂದ ಯಾರಿಗೂ ತೊಂದ್ರೆ ಅಗುವುದಿಲ್ಲ. ಸುಪ್ರಿಂಕೋರ್ಟ್ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು. ರಾಷ್ಟ್ರದ ಹಿತದೃಷ್ಟಿಯಿಂದ ಜಾತಿ ತರಬಾರದು ಎಂದರು.

ಸುಪ್ರೀಂ ತೀರ್ಪು ಸ್ವಾಗತಿಸಿದ ಹೆಬ್ಬಾರ್​, ಈಶ್ವರಪ್ಪ

ಇನ್ನು, ಕಾರ್ಮಿಕ ಸಚಿವ ಹೆಬ್ಬಾರ್​ ಸಹ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತ ಮಾಡಿದ್ದಾರೆ. ಇದನ್ನು ಹಿಂದೆಯೇ ಕೇಂದ್ರ ಸರ್ಕಾರ ಜಾರಿ ಮಾಡಿದ್ದರೂ ಸಹ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು‌. ಇದರಿಂದ ಸುಪ್ರೀಂ ಕೋರ್ಟ್ ತೀರ್ಪು ಮಹತ್ವ ಪಡೆದುಕೊಂಡಿದೆ. ಮೇಲ್ವರ್ಗದ ಜಾತಿಯಲ್ಲಿ ಬಡವರು, ಹಿಂದುಳಿದವರು ಇದ್ದಾರೆ. ಅವರಿಗೆ ಮೀಸಲಾತಿ ನೀಡಿದ್ರೆ, ಅವರು ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಮುಂದುವರೆದ ಜಾತಿಗಳ ಆರ್ಥಿಕ ದುರ್ಬಲ ವರ್ಗಕ್ಕೆ ಶೇ 10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Last Updated : Nov 7, 2022, 5:48 PM IST

ABOUT THE AUTHOR

...view details