ಕರ್ನಾಟಕ

karnataka

ETV Bharat / state

ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯಾದ್ಯಂತ ಹೈ ಅಲರ್ಟ್​: ‌ಬೆಂಗಳೂರು, ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ - ಅಯೋಧ್ಯೆ ತೀರ್ಪು ಪ್ರಕಟ ಲೇಟೆಸ್ಟ್​​ ನ್ಯೂಸ್​

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ

By

Published : Nov 9, 2019, 9:14 AM IST

Updated : Nov 9, 2019, 9:32 AM IST

ಶಿವಮೊಗ್ಗ/ಬೆಂಗಳೂರು:ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ 6 - ಕೆಎಸ್ಆರ್​​ಪಿ ತುಕಡಿ, 18 - ಡಿ.ಎ.ಆರ್. ತುಕಡಿಗಳು ಹಾಗೂ 1 ಡಿ-ಸ್ಪಾಟ್ ತುಕಡಿಯನ್ನು ಬಂದೋಬಸ್ತ್​​​ಗಾಗಿ ನಿಯೋಜನೆ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ತೀವ್ರ ನಿಗಾ ಇಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ:
ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಪರೀಕ್ಷೆಗಳನ್ನು (ಬಿ.ಎಡ್ ಸೇರಿದಂತೆ) ಮುಂದೂಡಲಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು ತಿಳಿಸಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ:
ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರು ವಿವಿ ದೂರ ಶಿಕ್ಷಣ ವಿಭಾಗದ ಪರೀಕ್ಷೆಗಳು, ಯುಜಿ ಮತ್ತು ಪಿಜಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.‌ ಸರ್ಕಾರ ಎಲ್ಲಾ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನ ತಿಳಿಸಲಾಗುವುದು ಅಂತ ಬೆಂಗಳೂರು ವಿವಿ ಪರೀಕ್ಷಾ ಕುಲಸಚಿವ ಪ್ರೊ. ಸಿ.ಶಿವರಾಜು ಮಾಹಿತಿ ನೀಡಿದ್ದಾರೆ‌..

Last Updated : Nov 9, 2019, 9:32 AM IST

ABOUT THE AUTHOR

...view details