ಕರ್ನಾಟಕ

karnataka

ETV Bharat / state

ಶಿವಮೊಗ್ಗ ಜಿಲ್ಲಾದ್ಯಂತ ಹೈ ಅಲರ್ಟ್: ಪೊಲೀಸ್ ಬಿಗಿ ಭದ್ರತೆ - police protectio

ಕೇಂದ್ರ ಗುಪ್ತಚರ ದಳದ ಮಾಹಿತಿ ಮೇರೆಗೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್​ ಘೋಷಣೆಯಾಗಿದೆ. ಅಂತೆಯೇ ಶಿವಮೊಗ್ಗದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಹೈ ಅಲರ್ಟ್

By

Published : Aug 18, 2019, 8:21 AM IST

ಶಿವಮೊಗ್ಗ:ಉಗ್ರರ ದಾಳಿ ಶಂಕೆ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸೂಚನೆಯಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ನಗರದ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಪಾರ್ಕ್, ದೇವಸ್ಥಾನ, ಶಿವಪ್ಪ ನಾಯಕ ಮಾಲ್​​​ಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಶಿವಮೊಗ್ಗ ಜಿಲ್ಲಾದ್ಯಂತ ಹೈ ಅಲರ್ಟ್

ಮುಂಜಾಗೃತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ಸರ್ಕಾರದ ಆದೇಶ ಬರುವ ತನಕ ಹೈ ಅಲರ್ಟ್ ಮುಂದುವರೆಯಲಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿದೆ.

ABOUT THE AUTHOR

...view details