ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ - ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ​​​​​​​

ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ
ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ

By

Published : Nov 28, 2019, 5:39 PM IST

ಶಿವಮೊಗ್ಗ: ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಾಂಗ್ಲಾ, ಮಯನ್ಮಾರ್ ಪಾಕಿಸ್ತಾನದಿಂದ ಬಂದ ನುಸುಳುಕೋರರ ಸಂಖ್ಯೆ ನಿರ್ದಿಷ್ಟವಾಗಿ ಎಷ್ಟಿದೆ ಎಂದು ತಿಳಿದುಕೊಳ್ಳಲು ಎಲ್ಲಾ ರಾಜ್ಯಗಳಿಗೆ ರಾಷ್ಟ್ರೀಯ ನಾಗರಿಕ ನೋಂದಣಿ ಪಟ್ಟಿಯನ್ನು ತಯಾರು ಮಾಡಲು ತಕ್ಷಣ ಆದೇಶ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ರು.

ಹಿಂದೂ ಹೋರಾಟಗಾರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಗಟ್ಟಿ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಒಳನುಸುಳುಕೋರರನ್ನು ಕೂಡಲೇ ಹೊರಗಟ್ಟಬೇಕೆಂದು ಒತ್ತಾಯಿಸಿದ್ರು. ಬಾಂಗ್ಲಾದೇಶದ ಭಯೋತ್ಪಾದಕ ಸಂಘಟನೆಯ ನುಸುಳುಕೋರರ ಮೂಲಕ ಭಾರತದಲ್ಲಿ ಭಯೋತ್ಪಾದನೆ ವೇಗವಾಗಿ ಬೆಳೆಯುತ್ತಿದೆ ಎಂದು ರಾಷ್ಟ್ರೀಯ ತನಿಖಾ ದಳ ಮಾಹಿತಿ ನೀಡಿದೆ. ಹಾಗಾಗಿ ಕೂಡಲೇ ಈ ಕುರಿತಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ

ಇನ್ನು JNU ಯುನಿವರ್ಸಿಟಿಯಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಸಿ ಹಚ್ಚಲಾಗಿದೆ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೋಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

For All Latest Updates

TAGGED:

ABOUT THE AUTHOR

...view details