ಶಿವಮೊಗ್ಗ :ಪಿಎಸ್ಐ ಪರೀಕ್ಷಾ ಹಗರಣದಲ್ಲಿ ರಾಜ್ಯದ ಪ್ರಭಾವಿ ಸಚಿವರೊಬ್ಬರ ಸಂಬಂಧಿ ಭಾಗಿಯಾಗಿರುವ ಆರೋಪದ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಪಿಎಸ್ಐ ಪರೀಕ್ಷೆಯ ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಪಿಎಸ್ಐ ಪರೀಕ್ಷಾ ಹಗರಣದ ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ
ತನಿಖೆಯ ಬಗ್ಗೆ ನಾನು ಮುಂದೆ ತಿಳಿಸುತ್ತೇನೆ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ತಮಗೆ ಗೊತ್ತಿಲ್ಲದ ವಿಷಯಗಳನ್ನೆಲ್ಲಾ ಮಾತನಾಡುತ್ತಿದ್ದಾರೆ. ಅವರಿಗೆ ಏನೂ ಗೊತ್ತಿಲ್ಲ. ಅವರು ಸುಮ್ಮನೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು..
ಗೃಹ ಸಚಿವ ಆರಗ ಜ್ಞಾನೇಂದ್ರ
ಪಿಎಸ್ಐ ಪರೀಕ್ಷಾ ಹಗರಣದಲ್ಲಿ ಈಗಾಗಲೇ ಸಾಕಷ್ಟು ಜನ ಅರೆಸ್ಟ್ ಆಗಿದ್ದಾರೆ. ಇನ್ನು ಮುಂದೆಯೂ ಸಹ ಅರೆಸ್ಟ್ ಆಗುತ್ತಾರೆ. ತನಿಖೆಯ ಬಗ್ಗೆ ನಾನು ಮುಂದೆ ತಿಳಿಸುತ್ತೇನೆ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ತಮಗೆ ಗೊತ್ತಿಲ್ಲದ ವಿಷಯಗಳನ್ನೆಲ್ಲಾ ಮಾತನಾಡುತ್ತಿದ್ದಾರೆ. ಅವರಿಗೆ ಏನೂ ಗೊತ್ತಿಲ್ಲ. ಅವರು ಸುಮ್ಮನೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಎಂಇಎಸ್ ಕುರಿತು ತಲೆ ಕೆಡಿಸಿಕೊಳ್ಳುವಂತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ ಎಂದರು.
ಓದಿ:ನಾವು ಗಂಡಸರಲ್ಲ, ಅವರೋಬ್ಬರೇ ಗಂಡಸರು. ಹೀಗಾಗಿ ನಮಗೆ ಭಯ ಆಗುತ್ತಿದೆ: ಡಿಕೆಶಿ
Last Updated : May 2, 2022, 5:37 PM IST