ಶಿವಮೊಗ್ಗ :ನಗರದ ಪ್ರಿಯಾಂಕಾ ಲೇಔಟ್ನಲ್ಲಿನ ಮೂರನೇ ಕ್ರಾಸ್ನ ಮನೆಯೊಂದರಲ್ಲಿ ರಕ್ತದ ಮಡುವಿನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಗೃಹಿಣಿಯು ಸಾವನ್ನಪ್ಪಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸ್ಥಳಕ್ಕೆ ತುಂಗಾನಗರ ಪೊಲೀಸರು ಬಂದಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರನ್ನು 30 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ.
ಶಿವಮೊಗ್ಗ: ರಕ್ತದ ಮಡುವಿನಲ್ಲಿ ಗೃಹಿಣಿ ಶವ ಪತ್ತೆ, ಕೊಲೆ ಶಂಕೆ - ಈಟಿವಿ ಭಾರತ್ ಕನ್ನಡ
ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಗೃಹಿಣಿಯ ಶವ ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್ನಲ್ಲಿ ಕಂಡು ಬಂದಿದ್ದು, ಕೊಲೆ ಎಂದು ಶಂಕಿಸಲಾಗಿದೆ.

ರಕ್ತದ ಮಡುವಿನಲ್ಲಿ ಗೃಹಿಣಿ ಶವ ಪತ್ತೆ
ನಿನ್ನೆ ರಾತ್ರಿ ಮನೆಯಲ್ಲಿ ಗಂಡ ಹೆಂಡತಿಯ ನಡುವೆ ಜಗಳವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದು, ಇದೇ ವಿಚಾರವಾಗಿ ಘಟನೆ ಕೊಲೆ ಸಂಭವಿಸಿತಾ ಎಂಬ ಅನುಮಾನ ಮೂಡಿದೆ. ಘಟನೆಯಲ್ಲಿ ಮಹಿಳೆಯ ಮೃತದೇಹ ಅಡುಗೆ ಕೋಣೆಯಲ್ಲಿ ಪತ್ತೆಯಾಗಿದ್ದು, ಚಾಕುವಿನಿಂದ ಕತ್ತು ಕೊಯ್ದುಕೊಂಡರೇ ಅಥವಾ ಕೊಲೆಯೇ ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
ಇದನ್ನೂ ಓದಿ :ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸರು, ಒಬ್ಬರ ಮೃತದೇಹ ಪತ್ತೆ..
Last Updated : Sep 7, 2022, 12:36 PM IST