ಶಿವಮೊಗ್ಗ: ಸಿಎಂ ಯಡಿಯೂರಪ್ಪ ಬಜೆಟ್ನಲ್ಲಿ ಸಾಮಾನ್ಯವಾಗಿ ತವರು ಜಿಲ್ಲೆ ಶಿವಮೊಗ್ಗಕ್ಕೆ ಅನೇಕ ಹೊಸ ಯೋಜನೆಗಳನ್ನು ನೀಡುತ್ತಾರೆ ಎಂಬ ಅನೇಕ ನಿರೀಕ್ಷೆಗಳನ್ನು ಜನ ಇಟ್ಟುಕೊಂಡಿದ್ದರು. ಆದರೆ ಸಿಎಂ ಕೆಲವೇ ಯೋಜನೆಗಳನ್ನಷ್ಟೆ ಪ್ರಕಟಿಸಿದ್ದಾರೆ.
ಸಿಎಂ ಯಡಿಯೂರಪ್ಪ ಬಜೆಟ್ನಲ್ಲಿ ತವರು ಜಿಲ್ಲೆಗೆ ಕೊಟ್ಟಿದ್ದೆಷ್ಟು? - ರಾಜ್ಯ ಬಜೆಟ್
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕ್ರಮವಾಗಿ ೩೮೪ ಕೋಟಿ ರೂ. ಮತ್ತು ೨೨೦ ಕೋಟಿ ರೂ. ನೀಡಲಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕ ನಿರ್ಮಿಸಲು ಗ್ರಾಮಬಂಧ ಸೇತುವೆ ಯೋಜನೆ ಅಡಿ 100 ಕೋಟಿ ರೂ. ವೆಚ್ಚದಲ್ಲಿ ಅನುದಾನ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗಾಗಿ ಎರಡು ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಪಶುವೈದ್ಯಕೀಯ ವಿಜ್ಞಾನದಲ್ಲಿ ಆಯುರ್ವೇದ ಔಷಧಗಳ ಅಳವಡಿಕೆ ಉತ್ತೇಜಿಸಲು ಈ ಕೇಂದ್ರ ಸ್ಥಾಪನೆ ಅನುಕೂಲವಾಗಲಿದೆ. ಶಿವಮೊಗ್ಗದಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಿದ್ದಾರೆ. ಶಿವಮೊಗ್ಗ ಮತ್ತು ಮೈಸೂರಿನಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಸಂಸ್ಥೆ ಮಾದರಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ನೀಡುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದಾರೆ.
ಶಿವಮೊಗ್ಗ - ಸವಳಂಗ - ಶಿಕಾರಿಪುರ - ಶಿರಾಳಕೊಪ್ಪ ಮಾರ್ಗದಲ್ಲಿ ಅತ್ಯಾಧುನಿಕ ಸಂಚಾರ ವ್ಯವಸ್ಥೆ, ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಮತ್ತು ಸೇಫ್ಟಿ ಸಲ್ಯೂಷನ್ಸ್ ಪ್ರಾಯೋಗಿಕವಾಗಿ ಆರಂಭ. ವೈಜ್ಞಾನಿಕ ಸಂಚಾರ ನಿರ್ವಹಣಾ ವ್ಯವಸ್ಥೆಯಡಿ ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಈ ಯೋಜನೆ ಆರಂಭಿಸಲಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕ್ರಮವಾಗಿ ೩೮೪ ಕೋಟಿ ರೂ. ಮತ್ತು ೨೨೦ ಕೋಟಿ ರೂ. ನೀಡಲಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕ ನಿರ್ಮಿಸಲು ಗ್ರಾಮಬಂಧ ಸೇತುವೆ ಯೋಜನೆ ಅಡಿ 100 ಕೋಟಿ ರೂ. ವೆಚ್ಚದಲ್ಲಿ ಅನುದಾನ ಘೋಷಣೆ ಮಾಡಿದ್ದಾರೆ.