ಶಿವಮೊಗ್ಗ:ಕೊರೊನಾ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್ಗೆ ಸಾಗರದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಗುಲಾಬಿ ಹೂ ನೀಡಿ ಅಭಿನಂದನೆ ಸಲ್ಲಿಸಲಾಯಿತು.
ಕೊರೊನಾ ವಾರಿಯರ್ಸ್ಗೆ ಗುಲಾಬಿ ಹೂ ನೀಡಿ ಅಭಿನಂದನೆ - shivamoga corona warriers news
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ, ಹೋಂ ಗಾರ್ಡ್, ಆರೋಗ್ಯ ಇಲಾಖೆ, ನಗರಸಭೆಯ ಅಧಿಕಾರಿಗಳು ಸೇರಿದಂತೆ ಇತರರನ್ನು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಮಾನವ ಹಕ್ಕುಗಳ ಹೋರಾಟ ಸಮಿತಿ
ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ, ಹೋಂ ಗಾರ್ಡ್, ಆರೋಗ್ಯ ಇಲಾಖೆ, ನಗರಸಭೆಯ ಅಧಿಕಾರಿಗಳು ಸೇರಿದಂತೆ ಇತರರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿಮಿತಿಯ ಕಾರ್ಯದರ್ಶಿ ರಾಮಣ್ಣ, ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಿ, ಜನರ ಆರೋಗ್ಯ ರಕ್ಷಣೆ ಮಾಡುತ್ತಿರುವುದು ಶ್ಲಾಘನೀಯ. ಇದೇ ರೀತಿ ಕರ್ತವ್ಯ ಮುಂದುವರೆಸುವ ಶಕ್ತಿ ಅವರಿಗೆ ನೀಡಲಿ ಎಂದು ಶುಭ ಹಾರೈಸಿದರು.