ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ ಹಾಕಿದ ಪತಿ!

ಪತಿಯೇ ಪತ್ನಿಯ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ.

husband-threat-to-wife-by-a-private-video
ಶಿವಮೊಗ್ಗ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ ಹಾಕಿದ ಪತಿ

By

Published : Jun 4, 2022, 6:00 PM IST

ಶಿವಮೊಗ್ಗ: ಪತಿಯೇ ಪತ್ನಿಯ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಗೃಹಿಣಿಯೊಬ್ಬರು ಪೊಲೀಸರಿಗೆ ದೂರು ನೀಡಿದ ಘಟನೆ ನಗರದಲ್ಲಿ ನಡೆದಿದೆ.

ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿಯಾದ ಈ ವ್ಯಕ್ತಿ ವಿರುದ್ಧ ಆತನ ಪತ್ನಿ ದೂರು ನೀಡಿದ್ದಾಳೆ. 1993ರಲ್ಲಿ ಇವರ ಮದುವೆ ಆಗಿದ್ದು, ನಂತರ ದಂಪತಿ ನಡುವೆ ಜಗಳ ನಡೆದು ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದ್ದರು.

ಆದರೆ ಗುರುವಾರ ಆರ್​ಎಂಎಲ್ ನಗರದಲ್ಲಿ ತಾನು ನಡೆದುಕೊಂಡು ಹೋಗುವಾಗ ಪತಿ ತನ್ನ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ನನ್ನ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ:ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ.. ವರದಕ್ಷಿಣೆ ಕಿರುಕುಳ ಆರೋಪ

ABOUT THE AUTHOR

...view details