ಶಿವಮೊಗ್ಗ: ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರೊಬ್ಬ ನಾಸ್ತಿಕ, ಅವರ ಮಾತಿಗೆ ನನ್ನ ವಿರೋಧವಿದೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.
ಶಿಕಾರಿಪುರ ತಾಲೂಕಿನ ಮಳೂರಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹಿಂದೂ ಎಂದ್ರೆ ಅದು ನಮ್ಮ ಜೀವನದ ಒಂದು ಶೈಲಿ. ಹಿಂದೂ ಅಂದ್ರೆ ನಾವೆಲ್ಲಾ ಜಾತಿ ಭೇದ ಮರೆತು, ಎಲ್ಲಾ ಒಂದೇ ತಾಯಿಯ ಮಕ್ಕಳೆಂದು ಚಿಂತನೆ ಮಾಡ್ತಾ ಇದ್ದೀವಿ ಎಂದರು.
ಇಂತಹ ಸಂದರ್ಭದಲ್ಲಿ ಹಿಂದೂ ಪದದ ಅರ್ಥ ಪರ್ಷಿಯನ್ ಭಾಷೆಯಲ್ಲಿ ಅಶ್ಲೀಲವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳ್ತಾ ಇದ್ದಾರೆ. ಇದು ಖಂಡನೀಯ ಎಂದು ಸಂಸದರು ಹೇಳಿದರು.
ಬಿ ವೈ ರಾಘವೇಂದ್ರ ಪ್ರತಿಕ್ರಿಯೆ ತಮ್ಮ ಹೇಳಿಕೆಗೆ ಕಾಂಗ್ರೆಸ್ ನಾಯಕರು ಸೇರಿದಂತೆ ರಾಜ್ಯ ಮತ್ತು ದೇಶಾದ್ಯಂತ ವ್ಯಾಪಕ ವಿರೋಧ ಮತ್ತು ಖಂಡನೆ ವ್ಯಕ್ತವಾದ ಹಿನ್ನೆಲೆ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ವಿಷಾದ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ:ನನ್ನ ಹೇಳಿಕೆ ಹಿಂಪಡೆಯುತ್ತಿದ್ದೇನೆ.. ಸಿಎಂಗೆ ಪತ್ರ ಬರೆದ ಸತೀಶ್ ಜಾರಕಿಹೊಳಿ