ಶಿವಮೊಗ್ಗ: ನಾನಂತೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಬಿಜೆಪಿ ಶಾಸಕ ಕೆ ಎಸ್ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ನಾನಂತೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ : ಕೆ ಎಸ್ ಈಶ್ವರಪ್ಪ
ಲೋಕಸಭಾ ಚುನಾವಣಾ ಫಲಿತಾಂಶದ ನಂತ್ರ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ವೇಳೆ ಯಡಿಯೂರಪ್ಪ ಅಧ್ಯಕ್ಷರಾಗಿ ಮುಂದುವರೆಯುತ್ತಾರೋ, ವಿರೋಧ ಪಕ್ಷದ ನಾಯಕರಾಗಿ ಉಳಿಯುತ್ತಾರೋ ನೋಡಬೇಕು ಎಂದ ಕೆ ಎಸ್ ಈಶ್ವರಪ್ಪ.
ಇವತ್ತು ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ವೇಳೆ ಯಡಿಯೂರಪ್ಪ ಅಧ್ಯಕ್ಷರಾಗಿ ಮುಂದುವರೆಯುತ್ತಾರೋ, ವಿರೋಧ ಪಕ್ಷದ ನಾಯಕರಾಗಿ ಉಳಿಯುತ್ತಾರೋ ನೋಡಬೇಕು ಎಂದರು. ಮೈತ್ರಿ ಸರ್ಕಾರದಲ್ಲಿ ಪರ್ಯಾಯ ಸಿಎಂ ಮಾಡಲು ಹೊರಟಿದ್ದಾರೆ. ಸಿಎಂ ಕುಮಾರಸ್ವಾಮಿರವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹಾಗೂ ಮಗನ ಗೆಲುವಿಗಾಗಿ ದೇವಾಲಯಗಳ ಭೇಟಿ ಹಾಗೂ ಹೋಮ-ಹವನ ನಡೆಸುತ್ತಿದ್ದಾರೆ. ಉಳಿದಂತೆ ರೆಸಾರ್ಟ್ನಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ರೆಸಾರ್ಟ್ನಲ್ಲಿಯೇ ರಾಜ್ಯದ ಬರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿ ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿಗೂ ಸಹ ಹಾಹಾಕಾರವಿದೆ. ಬರ ಕಾಮಗಾರಿಗೆ ಸಾಕಷ್ಟು ಹಣ ಇದೆ. ಹಣ ಖರ್ಚು ಮಾಡಿ ಜನರಿಗೆ ನೀರು ಕೊಡಿ ಎಂದು ಆಗ್ರಹಿಸಿದ ಅವರು ಬಿಜೆಪಿ ಎರಡುೂ ಉಪ ಚುನಾವಣೆಯಲ್ಲಿ ಗೆಲ್ಲಲಿದೆ. ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲಲಿದೆ. ಟ್ರಬಲ್ ಶೂಟರ್ ಕೆಲಸ ನಡೆಯೋದಿಲ್ಲ ಎಂದು ಸಚಿವ ಡಿ ಕೆ ಶಿವಕುಮಾರ್ ವಿರುದ್ದ ಗುಡುಗಿದರು.