ಶಿವಮೊಗ್ಗ: ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತ್ತು ಪೊಲೀಸ್ ಇಲಾಖೆಯ ಮನವಿ ಮೇರೆಗೆ ಫೆಬ್ರವರಿ 25ರ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ವಿಸ್ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರಿಕೆ ಮಾಡಿರುವುದರಿಂದ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಎಲ್ಲಾವನ್ನು 144 ಸೆಕ್ಷನ್ ರೀತಿ ನಡೆಸಲಾಗುತ್ತಿದೆ. ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕಾದ ಕಾರಣ ಪ್ರತಿ ಠಾಣಾವಾರು ಮ್ಯಾಜಿಸ್ಟ್ರೇಟ್ಗಳನ್ನು ನಿಯೋಜಿಸಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ರವಿಚಂದ್ರ ನಾಯಕ್ ಹಾಗೂ ಸಿಮ್ಸ್ನ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸೂಡಾದ ಆಯುಕ್ತ ಕೋಟ್ರೇಶ್, ಜಿಲ್ಲಾ ಯೋಜನಾ ನಿರ್ದೇಶಕರಾದ ಮೂಕಪ್ಪ ಕರೆಭೀಮಣ್ಣನವರ್, ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಪ್ರಮೋದ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್ರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಹರ್ಷ ಕೊಲೆ ಪ್ರಕರಣ.. ಶಿವಮೊಗ್ಗದಲ್ಲಿ ಆರು ಆರೋಪಿಗಳ ಬಂಧನ, ಕರ್ಫ್ಯೂ ವಿಸ್ತರಣೆ
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕಿರಣ್ ಕುಮಾರ್ರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.