ಶಿವಮೊಗ್ಗ: ಮುಂಗಾರು ಬಿತ್ತನೆಗೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದಂತೆ ಅನಧಿಕೃತ ಬಿತ್ತನೆ ಬೀಜಗಳ ಹಾವಳಿ ಹೆಚ್ಚಾಗಿದೆ. ಹಾಗಾಗಿ ರೈತರು ಯಾವುದೇ ಕಾರಣಕ್ಕೂ ಅನಧಿಕೃತ ಬಿತ್ತನೆ ಬೀಜ ತೆಗೆದುಕೊಳ್ಳಬಾರದು ಎಂದು ಕೃಷಿ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್ ತಿಳಿಸಿದರು.
ಅನಧಿಕೃತ ಬಿತ್ತನೆ ಬೀಜಗಳ ಹಾವಳಿಗೆ ಮರುಳಾಗದಿರಿ: ಡಾ ಕಿರಣ್ ಕುಮಾರ್ ಸಲಹೆ
ಶಿವಮೊಗ್ಗ ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜದ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಕೃಷಿ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್ ರೈತರಿಗೆ ಕೆಲವು ಸಲಹೆ ಮತ್ತು ಸೂಚನೆ ಕೊಟ್ಟರು.
ಕೃಷಿ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್
ಈ ಕುರಿತು ಈ ಟಿವಿ ಭಾರತ ಜೊತೆ ಮಾತನಾಡಿದ ಅವರು, ಅನಧಿಕೃತ ಬಿತ್ತನೆ ಬೀಜಗಳ ಹಾವಳಿ ಹೆಚ್ಚಾಗಿದ್ದು, ರೈತರು ಯಾವುದೇ ಕಾರಣಕ್ಕೂ ಅನಧಿಕೃತ ಬಿತ್ತನೆ ಬೀಜಗಳನ್ನು ತೆಗೆದುಕೊಳ್ಳಬಾರದು. ಕೇವಲ ದೃಡೀಕೃತ ಬಿತ್ತನೆ ಬೀಜಗಳನ್ನು ಮಾತ್ರ ಮಾರಾಟಗಾರರ ಬಳಿ ತೆಗೆದುಕೊಳ್ಳಬೇಕು ಎಂದರು.
ಇನ್ನು ಯಾರಾದರೂ ನಕಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡುತ್ತಿದ್ದರೆ, ಈ ಬಗ್ಗೆ ಹತ್ತಿರದ ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ ಹಾಗೂ ನಕಲಿ ಮಾರಾಟಗಾರರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾವುದು ಎಂದು ತಿಳಿಸಿದರು.