ಶಿವಮೊಗ್ಗ:ಬಸವ ವಸತಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದ್ದಾರೆ.
ಬಸವ ವಸತಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಿ: ಕಲ್ಲೂರು ಮೇಘರಾಜ್ ಒತ್ತಾಯ - ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ
ಬಸವ ವಸತಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದ್ದಾರೆ.
![ಬಸವ ವಸತಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಿ: ಕಲ್ಲೂರು ಮೇಘರಾಜ್ ಒತ್ತಾಯ](https://etvbharatimages.akamaized.net/etvbharat/prod-images/768-512-4621164-thumbnail-3x2-vid.jpg)
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 5659 ಗ್ರಾಮಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಬಸವ ವಸತಿ ಯೋಜನೆ ಅಡಿಯಲ್ಲಿ ಆಯ್ಕೆ ಮಾಡಿದ 1.30.180 ಅರ್ಹ ಮಹಿಳಾ ವಸತಿ ರಹಿತರ ಪಟ್ಟಿಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು 8 ತಿಂಗಳುಗಳಿಂದ ಅನುಮೋದನೆ ನೀಡಿ ಇಟ್ಟುಕೊಂಡಿದ್ದಾರೆ. ಸರ್ಕಾರದ ಸಹಾಯಧನ 1611 ಕೋಟಿ 80 ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸದಿರುವ ಜನವಿರೋಧಿ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದರು.
ಇನ್ನು ಕಳೆದ ಎಂಟು ತಿಂಗಳುಗಳಿಂದ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಿದೆ. ಸರ್ಕಾರದ ಸಹಾಯಧನ ಬಿಡುಗಡೆ ಮಾಡದೆ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು. ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹಾಗೂ ವಸತಿ ಸಚಿವ ಸೋಮಣ್ಣ ಕೂಡಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಗಮನಹರಿಸಿ ಕ್ರಮ ಕೈಗೊಂಡು ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಲು ಮತ್ತು ಸಹಾಯಧನ ಬಿಡುಗಡೆಗೊಳಿಸಲು ಆದೇಶ ನೀಡಬೇಕೆಂದು ಆಗ್ರಹಿಸಿದರು.