ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿತು.
ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ರಾಜ್ಯ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಈ ವೇಳೆ ಕಂಡುಬಂದರು.