ಕರ್ನಾಟಕ

karnataka

ETV Bharat / state

ಶಿವಮೊಗ್ಗ: ವೈದ್ಯಾಧಿಕಾರಿಗಳ ಹುದ್ದೆಗೆ ನೇರ ನೇಮಕಾತಿ - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 4 ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಎಂಬಿಬಿಎಸ್ ಪದವೀಧರರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹೇಳಿದ್ದಾರೆ.

officer
officer

By

Published : May 16, 2020, 9:37 AM IST

ಶಿವಮೊಗ್ಗ: ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯದ 4 ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಎಂಬಿಬಿಎಸ್ ಪದವೀಧರರನ್ನು ಗುತ್ತಿಗೆ ಆಧಾರದ ಮೇಲೆ ನಿಬಂಧನೆಗಳಿಗೊಳಪಟ್ಟು ನೇರವಾಗಿ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಬಿಬಿಎಸ್ ವೈದ್ಯರು ಲಭ್ಯವಿಲ್ಲದಿದ್ದ ಪಕ್ಷದಲ್ಲಿ ಆಯುಷ್ ವೈದ್ಯರನ್ನು ನೇಮಿಸಿಕೊಳ್ಳಲಾಗುವುದು. ಅಭ್ಯರ್ಥಿಗಳ ನೇಮಕಾತಿಯು ನೇರ ಸಂದರ್ಶನ ಮತ್ತು ರೋಸ್ಟರ್ ಆಧಾರದ ಮೇಲೆ ನಡೆಯಲಿದೆ. ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಮೆ 18ರಂದು ಬೆಳಿಗ್ಗೆ 10ರಿಂದ 1ರವರೆಗೆ ಶಿವಮೊಗ್ಗದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಇ-ಮೇಲ್ dho2shimoga@gamil.comಗೆ ಮೇ 18ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details