ಶಿವಮೊಗ್ಗ:ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21 ಲಕ್ಷ ರೂಪಾಯಿ ಹಾಗೂ 3 ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಶಿವಮೊಗ್ಗದಲ್ಲಿ ಮೂವರ ಬಂಧನ - Vishweshwaraiah Complex in Shimoga District
ಶಿವಮೊಗ್ಗ ಜಿಲ್ಲೆಯ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಶಿವಮೊಗ್ಗ ಜಿಲ್ಲೆಯಲ್ಲಿ ಮೂವರ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಅಂಗಡಿ ಮಾಲೀಕ ಅಜೇಯ(35), ಕಿರಣ್ (32), ಸಂದೀಪ್(28) ಎಂಬುವರನ್ನು ಬಂಧಿಸಲಾಗಿದೆ.
ಜಿಲ್ಲೆಯ ಜಯನಗರ ಠಾಣಾ ವ್ಯಾಪ್ತಿಯ ತಿಲಕ್ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದೆ.