ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಸಚಿವ ಸಿ.ಟಿ.ರವಿ ವಿರುದ್ಧ ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಸಚಿವ ಸಿ.ಟಿ.ರವಿ ಕನ್ನಡಪರ ಸಂಘಟನೆಗಳ ವಿರುದ್ಧ ಕೆಟ್ಟ ಪದ ಬಳಸಿ ಅವಮಾನಿಸಲಾಗಿದೆ. ಕೂಡಲೇ ಕ್ಷಮೆ ಕೇಳೆಬೇಕೆಂದು ಒತ್ತಾಯಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ
ಪ್ರತಿಭಟನೆ

By

Published : Jan 6, 2020, 11:05 PM IST

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕನ್ನಡಪರ ಸಂಘಟನೆಗಳ ವಿರುದ್ಧ ಕೆಟ್ಟ ಪದ ಬಳಸಿದ್ದು, ಇವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಿ.ಟಿ.ರವಿ ವಿರುದ್ಧ ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕಾರ್ಯಕ್ರಮವೊಂದರಲ್ಲಿ ಕನ್ನಡಪರ ಸಂಘಟನೆಗಳ ವಿಚಾರವಾಗಿ ಮಾತನಾಡಿ, ಸಂಘಟನೆಗಳು ತುಕಡೆ ಗ್ಯಾಂಗುಗಳೆಂದು ನಿಂಧಿಸಿ ಕರ್ನಾಟಕದ ನೆಲ, ಜಲ, ಭಾಷೆ, ಸಂಸ್ಕೃತಿಗೋಸ್ಕರ ಹೋರಾಟ ಮಾಡುವ ಎಲ್ಲ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು.

ಕಳೆದ ನವೆಂಬರ್ 1ರಂದು ರಾಜಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದ ಆ ದಿನವೇ ಸಚಿವ ಸಿ.ಟಿ.ರವಿಯವರು ಕನ್ನಡ ಧ್ವಜಾರೋಹಣ ಕಾರ್ಯಕ್ರಮಕ್ಕೆ ಭಾಗವಹಿಸದೇ ಕನ್ನಡ ಧ್ವಜಕ್ಕೆ , ಕನ್ನಡಾಂಬೆಗೆ ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಕಪ್ಪು ಬಾವುಟ ತೋರಿಸಿದ ಕೆಲವರ ವಿರುದ್ದ ಯಾವುದೇ ಹೇಳಿಕೆ ನೀಡದೇ ಪರೋಕ್ಷವಾಗಿ ಬೆಂಬಲಿಸಿರುವುದು ಇದರಿಂದ ತಿಳಿಯುತ್ತದೆ ಎಂದು ಪ್ರತಿಭಟನಾರರು ಮನವಿಯಲ್ಲಿ ತಿಳಿಸಿದ್ದಾರೆ. ಈ ಕೂಡಲೇ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕನ್ನಡಿಗರ ಕ್ಷಮೆ ಕೋರಬೇಕು, ಮುಂದೆ ಈ ರೀತಿಯ ತಪ್ಪುಗಳನ್ನು ಮಾಡಬಾರದು, ಇದೇ ಧೋರಣೆ ಮುಂದುವರೆದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು.

ABOUT THE AUTHOR

...view details