ಶಿವಮೊಗ್ಗ : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬಾರದೆಂಬ ಷಡ್ಯಂತ್ರ ನಡೆಸಲಾಗುತ್ತಿದೆ. ಸರ್ಕಾರ ಒಂದೋ ಪಂಚಮಸಾಲಿಗಳಿಗೆ ಮೀಸಲಾತಿ ನೀಡಿ, ಇಲ್ಲವಾದಲ್ಲಿ ಮೀಸಲಾತಿ ನೀಡುವುದಿಲ್ಲ ಎಂದು ಹೇಳಲಿ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದರು.
ಶಿವಮೊಗ್ಗದಲ್ಲಿಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಷಡ್ಯಂತ್ರಕ್ಕೆ ಬಲಿಯಾಗದೆ ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ಘೋಷಿಸಬೇಕು. ಕಾಣದ ಕೈಗಳು ಮೀಸಲಾತಿ ಘೋಷಿಸುವಲ್ಲಿ ಷಡ್ಯಂತ್ರ ಮಾಡುತ್ತಿವೆ. ಪಂಚಮಸಾಲಿ ಲಿಂಗಾಯತಕ್ಕೆ ಬಹಿರಂಗವಾಗಿ ಬೆಂಬಲ ನೀಡದೇ ಹೋದರೆ ಮುಂಬರುವ ಚುನಾವಣೆಗೆ ತೊಂದರೆ ಆಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.