ಶಿವಮೊಗ್ಗ:ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ನ ಅಧ್ಯಕ್ಷರಾಗಿ ಬಿಜೆಪಿಯ ಶ್ರೀಮತಿ ವಾಸಂತಿ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ.
ಜೋಗ-ಕಾರ್ಗಲ್ ಪಟ್ಟಣ ಪಂಚಾಯತ್ನಲ್ಲಿ ಅರಳಿದ ಕಮಲ - ಬಿಜೆಪಿಗೆ ಗೆಲುವು
ಇಂದು ನಡೆದ ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿಯ ಶ್ರೀಮತಿ ವಾಸಂತಿ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್
ಇಂದು ನಡೆದ ಚುನಾವಣೆಯಲ್ಲಿ ಜೋಗ-ಕಾರ್ಗಲ್ ಪಟ್ಟಣದ 5ನೇ ವಾರ್ಡ್ನ ಶ್ರೀಮತಿ ವಾಸಂತಿ ರಮೇಶ್ ಹಾಗೂ ಉಪಾಧ್ಯಕ್ಷರಾಗಿ 2ನೇ ವಾರ್ಡ್ನ ಮಂಜುನಾಥ್ ಆಯ್ಕೆಯಾಗಿದ್ದಾರೆ.
ಜೋಗ-ಕಾರ್ಗಲ್ ಪಟ್ಟಣ ಪಂಚಾಯತ್ ನ 11 ವಾರ್ಡ್ ಗಳಲ್ಲಿ ಬಿಜೆಪಿ 9, ಕಾಂಗ್ರೆಸ್ 1 ಹಾಗೂ ಪಕ್ಷೇತರ 1 ಸ್ಥಾನಗಳಿಸಿದ್ದವು. ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅಯ್ಕೆಯಾಗುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದರು.