ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಪಂಚ ಕೌರವರು ಕಾಣಸಿಗುತ್ತಿದ್ದಾರೆ: ಇವರನ್ನು ಪ್ರಸ್ತಾಪಿಸಿ ಈಶ್ವರಪ್ಪ ವ್ಯಂಗ್ಯ - ಮುಖ್ಯಮಂತ್ರಿ ರೇಸ್​

ವ್ಯಕ್ತಿ ಪೂಜೆ ಮಾಡಬಾರದೆಂದು ಸ್ವತಃ ಡಿ.ಕೆ. ಶಿವಕುಮಾರ್ ಒಂದು ಕಡೆ ಹೇಳ್ತಾರೆ. ಇನ್ನೊಂದೆಡೆ ಚಾಮರಾಜನಗರದಲ್ಲಿ ಕಾರ್ಯಕರ್ತರ ಮೂಲಕ ನಾನೇ ಸಿಎಂ ಎಂದು ಹೇಳಿಸುತ್ತಾರೆ ಎಂದು ಉಸ್ತುವಾರಿ ಸಚಿವ ಕೆ. ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

k-s-eshwarappa-outrage-against-congress-leaders
ಜಿಲ್ಲಾ ಕಾರ್ಯಕಾರಿಣಿ ಸಭೆ

By

Published : Jul 4, 2021, 3:52 PM IST

ಶಿವಮೊಗ್ಗ: ಮಹಾಭಾರತ ಎಂದ ಕೂಡಲೇ ಪಂಚ ಪಾಂಡವರು ನೆನಪಿಗೆ ಬರುತ್ತಾರೆ. ಆದರೆ ರಾಜ್ಯದಲ್ಲಿ ಪಂಚ ಕೌರವರು ಕಾಣಸಿಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಉಸ್ತುವಾರಿ ಸಚಿವ ಕೆ. ಎಸ್.ಈಶ್ವರಪ್ಪ

ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚ ಕೌರವರು ಅಧಿಕಾರ ಹಿಡಿಯಬೇಕೆಂದು ಪ್ರಯತ್ನಿಸುತ್ತಿದ್ದು, ಐದು ಜಾತಿಗೆ ಒಬ್ಬೊಬ್ಬರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. ಅದರಲ್ಲಿ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಪರಮೇಶ್ವರ್, ತನ್ವಿರ್ ಸೇಠ್ ಇದ್ದಾರೆ ಎಂದರು.

ಸಮಾಜವಾದವನ್ನು, ಸಾಮಾಜಿಕ ನ್ಯಾಯ ನೀಡುವುದಾಗಿ ಕೇವಲ ಬಾಯಿ ಮಾತಲ್ಲಿ ಹೇಳಿ ಸಿದ್ಧರಾಮಯ್ಯ ಸಿಎಂ ರೇಸ್‌ನಲ್ಲಿದ್ದರೆ, ವ್ಯಕ್ತಿ ಪೂಜೆ ಮಾಡಬಾರದೆಂದು ಸ್ವತಃ ಡಿ.ಕೆ. ಶಿವಕುಮಾರ್ ಒಂದು ಕಡೆ ಹೇಳ್ತಾರೆ. ಇನ್ನೊಂದೆಡೆ ಚಾಮರಾಜನಗರದಲ್ಲಿ ಕಾರ್ಯಕರ್ತರ ಮೂಲಕ ನಾನೇ ಸಿಎಂ ಎಂದು ಹೇಳಿಸುತ್ತಾರೆ ಎಂದು ಟೀಕಿಸಿದರು.

ಜನರೇ ತಿರಸ್ಕಾರ ಮಾಡಿ ಹೊರಗಟ್ಟಿದ್ದಾರೆ: ದಲಿತ ಮುಖ್ಯಮಂತ್ರಿ ಎಂದು ಹೇಳಿ ಪರಮೇಶ್ವರ್ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಇತ್ತ ಅಲ್ಪಸಂಖ್ಯಾತರಿಂದ ತನ್ವೀರ್ ಸೇಠ್ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ, ಜನರಿಂದ ತಿರಸ್ಕಾರಗೊಂಡ ಬಳಿಕ ಸುಮ್ಮನಿರಬೇಕಿತ್ತು. ಧರ್ಮವನ್ನು ಹಾಳು ಮಾಡುವ ಕಾಂಗ್ರೆಸ್ ಪಕ್ಷವನ್ನು ಜನರೇ ತಿರಸ್ಕಾರ ಮಾಡಿ ಹೊರಗಟ್ಟಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವಾಗಲೇ, ತಾವು ಮುಖ್ಯಮಂತ್ರಿ ಎಂದು ಇವರು ಬಡಿದಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಶೇ.80ರಷ್ಟು ವ್ಯಾಕ್ಸಿನೇಷನ್ ಮಾಡಿ.. ಸರ್ಕಾರಕ್ಕೆ ಮೂರು ತಿಂಗಳ ಡೆಡ್​ಲೈನ್​ ನೀಡಿದ್ರು ಡಿಕೆಶಿ

For All Latest Updates

ABOUT THE AUTHOR

...view details