ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ ಚುನಾಯಿತ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಬಗ್ಗೆ ಕ್ರಮ ತೆಗದುಕೊಳ್ಳಲು ರಾಜ್ಯ ಬಿಜೆಪಿ ಘಟಕಕ್ಕೆ ಅವಕಾಶವಿಲ್ಲ. ಇದರಿಂದ ಕೇಂದ್ರ ಬಿಜೆಪಿ ಘಟಕ ಶೀಘ್ರದಲ್ಲಿ ಕ್ರಮ ತೆಗೆದುಕೊಳ್ಳಲಿದೆ ಎಂದು ಶಾಸಕ ಯತ್ನಾಳ್ ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದರು.
ಚುನಾಯಿತ ಎಂಎಲ್ಎ, ಎಂಎಲ್ಸಿ ವಿರುದ್ಧ ರಾಜ್ಯ ಬಿಜೆಪಿ ಕ್ರಮ ತೆಗೆದುಕೊಳ್ಳುವಂತಿಲ್ಲ: ಕೆ.ಎಸ್.ಈಶ್ವರಪ್ಪ - shivmogga latest news
ಚುನಾಯಿತ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಬಗ್ಗೆ ಕ್ರಮ ತೆಗದುಕೊಳ್ಳಲು ರಾಜ್ಯ ಬಿಜೆಪಿ ಘಟಕಕ್ಕೆ ಅವಕಾಶವಿಲ್ಲ. ಹೀಗಾಗಿ ಕೇಂದ್ರ ಶೀಘ್ರವೇ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳಲಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಕೆ.ಎಸ್.ಈಶ್ವರಪ್ಪ
ಶಾಸಕ ಯತ್ನಾಳ್ ಅವರು ಸಿಎಂ ಯಡಿಯೂರಪ್ಪ ಹಾಗೂ ಸರ್ಕಾರದ ವಿರುದ್ಧ ಅಪಾದನೆ ಮಾಡುತ್ತಾ ಬರುತ್ತಾ ಇದ್ದಾರೆ. ಹೀಗೆ ಹೇಳಿಕೆ ನೀಡಬೇಡಿ ಎಂದು ಹೇಳಿದ್ರೂ ಕೂಡ ಅವರು ಹಾಗೆ ಮುಂದುವರೆಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಬಿಜೆಪಿ ಕ್ರಮ ತೆಗೆದುಕೊಳ್ಳುವ ಭರವಸೆ ಇದೆ ಎಂದರು.
ಯತ್ನಾಳ್ ರವರ ಕುರಿತು ಕೇಂದ್ರದ ಶಿಸ್ತು ಸಮಿತಿಗೆ ತಿಳಿಸಿರುವುದಾಗಿ ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ ಕುಮಾರ್ ಕಟೀಲ್ ರವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.