ಕರ್ನಾಟಕ

karnataka

ETV Bharat / state

'ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ' - ಶಿವಮೊಗ್ಗದ ಗಲಭೆ ಬಗ್ಗೆ ಕೆ ಎಸ್​ ಈಶ್ವರಪ್ಪ ಪ್ರತಿಕ್ರಿಯೆ

ಕಲ್ಲು ತೂರಾಟ ಮಾಡುವ ಪುಂಡರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಕೆ. ಎಸ್‌ ಈಶ್ವರಪ್ಪ
ಕೆ. ಎಸ್‌ ಈಶ್ವರಪ್ಪ

By

Published : Apr 20, 2022, 9:47 PM IST

ಶಿವಮೊಗ್ಗ: ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ. ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋದಿಸುವ ಹೇಳಿಕೆ ಕೊಡುತ್ತಾರೆ ಎಂದರು.

ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ, ದೇವಾಲಯ, ಪೊಲೀಸ್ ತಲೆಗಳನ್ನು ಹುಡುಕಿ ಕಲ್ಲು ಹೊಡೆಯುತ್ತಾರೆ. ಈ ರೀತಿಯ ಕಲ್ಲು ತೂರಾಟ ಮಾಡುವ ಪುಂಡರಿಗೆ ತಕ್ಕ ಶಿಕ್ಷೆಯಾಗಬೇಕು. ಇದನ್ನು ನೇರವಾಗಿ ಎದುರಿಸುವ ಶಕ್ತಿ ಹಿಂದೂ ಸಂಘಟನೆಗಳಿಗಿದೆ. ಆದರೆ, ನಾವು ಕಾನೂನು ಕೈಗೆ ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ ಎಂದರು.

ಮಾಜಿ ಸಚಿವ ಕೆ. ಎಸ್‌ ಈಶ್ವರಪ್ಪ ಅವರು ಮಾತನಾಡಿದ್ದಾರೆ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಇವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ. ಪ್ರಚೋದನೆ ನಂತರ ಮೌಲ್ವಿ ಹೇಡಿಯ ರೀತಿ ಓಡಿ ಹೋಗಿದ್ದಾನೆ. ಗೂಂಡಾಗಿರಿಗೆ ಪ್ರಚೋದನೆ ಕೊಟ್ಟು ಓಡಿಹೋದ ರಾಷ್ಟ್ರದ್ರೋಹಿ ಮೌಲ್ವಿ ಬಂಧನಕ್ಕೆ ಒತ್ತಾಯಿಸುತ್ತೇನೆ. ಕೆಜಿ ಹಳ್ಳಿ, ಡಿಜೆ ಹಳ್ಳಿ, ಹರ್ಷ, ಚಂದ್ರು ಕೊಲೆಯಾಯಿತು. ಇದೀಗ ಹುಬ್ಬಳಿ ಘಟನೆ. ಈ ರೀತಿ ಕೊಲೆ, ದೊಂಬಿ ಮಾಡುವ ವ್ಯಕ್ತಿಗಳನ್ನು ಬಿಡಬಾರದು. ಸಿಸಿಟಿವಿ ಆಧರಿಸಿ ಈಗಾಗಲೇ ಬಂಧನ ಮಾಡಲಾಗುತ್ತಿದೆ. ಗೂಂಡಾ ಕಾಯ್ದೆ ಅಡಿ ಅವರನ್ನು ಬಂಧನ ಮಾಡಿ, ಗಡಿಪಾರು ಮಾಡಬೇಕು ಎಂದು ಹೇಳಿದರು.

ಕೊಲೆ, ದೊಂಬಿ ಮಾಡುವುದು, ಬೇಲ್ ಪಡೆದು ವಾಪಸ್ ಬರೋದು ಅವರಿಗೆ ಅಭ್ಯಾಸ ಆಗಿದೆ. ಘಟನೆಗಳಿಗೆ ಕಾರಣರಾದ ವ್ಯಕ್ತಿ, ಸಂಘಟನೆ, ಪಕ್ಷದ ಬಗ್ಗೆ ಗಮನ ಹರಿಸಬೇಕು. ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಆಯ್ತು. ಇನ್ನೆಲ್ಲಿ ಗಲಭೆ ಮಾಡುತ್ತಾರೋ ಗೊತ್ತಾಗಲ್ಲ. ಗಮನ ಹರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಕಮಿಷನ್ ದಾಖಲೆ ಕೊಡಿ: ದಿಂಗಾಲೇಶ್ವರ ಸ್ವಾಮೀಜಿ ನನ್ನ ಪರ ಮಾತಾಡಿದ್ದಕ್ಕೆ ಅಭಿನಂದನೆ ತಿಳಿಸುತ್ತೇನೆ. ಆದರೆ, ಕಮಿಷನ್ ಬಗ್ಗೆ ಸ್ವಾಮೀಜಿ ಆರೋಪಿಸುವ ಬದಲಿಗೆ ದಾಖಲೆಗಳನ್ನು ನೀಡಲಿ. ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಯಾವುದೇ ಇಲಾಖೆಗೆ ಕಮಿಷನ್ ಕೊಟ್ಟಿದ್ದರೆ ದಾಖಲೆ ನೀಡಿ ಎಂದರು.

ಇದನ್ನೂ ಓದಿ:ಕಾಂಗ್ರೆಸ್​ನವರು ತಬ್ಬಲಿ ಮಕ್ಕಳು, ಯಾರ ಹೆಸರು ಹೇಳಿಕೊಂಡು ಮತ ಕೇಳ್ತಾರೆ? : ಬಿಎಸ್​ವೈ ವ್ಯಂಗ್ಯ

For All Latest Updates

TAGGED:

ABOUT THE AUTHOR

...view details