ಶಿವಮೊಗ್ಗ: ರಾಜ್ಯ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ತಯಾರಿದೆ. ಆದರೆ ಕೊರೊನಾದಿಂದ ಚುನಾವಣೆ ನಡೆಸಲಾಗದು ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಕೊರೊನಾ ನಡುವೆ ಗ್ರಾ.ಪಂಚಾಯತ್ ಚುನಾವಣೆ ನಡೆಸಲಾಗದು: ಕೆ.ಎಸ್.ಈಶ್ವರಪ್ಪ - shivamogga Eshwarappa news
ರಾಜ್ಯ ಸರ್ಕಾರ ಗ್ರಾ.ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಿದ್ದವಿದ್ದರೂ ಸಹ ಕೊರೊನಾದಿಂದ ಚುನಾವಣೆ ನಡೆಸಲು ಆಗುವುದಿಲ್ಲ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ
ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಪ್ರಶ್ನೆ ಮಾಡಿತ್ತು. ಇದಕ್ಕೆ ಉತ್ತರ ನೀಡಿದ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ವಾರದಲ್ಲಿ ಚುನಾವಣೆ ನಡೆಸಲು ಸಿದ್ಧವಿದೆ ಎಂದು ತಿಳಿಸಿದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ರಾಜ್ಯ ಸರ್ಕಾರ ಚುನಾವಣೆ ನಡೆಸಲು ಸಿದ್ದವಿದ್ದರೂ ಸಹ ಕೊರೊನಾದಿಂದ ಚುನಾವಣೆ ನಡೆಸಲು ಆಗುವುದಿಲ್ಲ ಎಂದರು.