ಶಿವಮೊಗ್ಗ :ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖೈ ಹೆಚ್ಚುತ್ತಿರುವುದರಿಂದ ಲಾಕ್ಡೌನ್ ಮಾಡಬೇಕೇ ಬೇಡವೇ ಎಂಬ ಬಗ್ಗೆ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖೈ ಹೆಚ್ಚುತ್ತಿದೆ. ಅದರಂತೆ ಜಿಲ್ಲೆಯಲ್ಲೂ ಸಹ ಕೊರೊನಾ ಹೆಚ್ಚಾಗುತ್ತಿದೆ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಹಲವು ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಬೇಗನೆ ವ್ಯಾಪಾರ, ವಹಿವಾಟು ಮುಗಿಸುತ್ತಿದ್ದಾರೆ. ಗಾಂಧಿ ಬಜಾರ್ನಲ್ಲೂ ಸಹ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆ ತನಕ ವ್ಯಾಪಾರ ನಡೆಸುತ್ತಿದ್ದಾರೆ. ನಂತರ ಅವರೇ ಬಂದ್ ಮಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಲಾಕ್ಡೌನ್ ನಡೆಸುವ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಎಂಪಿಎಂ ಗುತ್ತಿಗೆ ನೌಕರರು ಸಚಿವರಿಗೆ ಅಂಬೇಡ್ಕರ್ ಭಾವಚಿತ್ರ ನೀಡಿದರು.