ಶಿವಮೊಗ್ಗ:ಹಾಸನ ನಗರದಲ್ಲಿ ಭಿಕ್ಷುಕಿಯೋರ್ವಳನ್ನು ಕೊಲೆ ಮಾಡಿ ಅತ್ಯಾಚಾರವೆಸಗಿದ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.
ಅತ್ಯಾಚಾರ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ - ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
ಹಾಸನ ನಗರದಲ್ಲಿ ಭಿಕ್ಷುಕಿಯೋರ್ವಳನ್ನು ಕೊಲೆ ಮಾಡಿ ಅತ್ಯಾಚಾರವೆಸಗಿದ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.
ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
ಭಿಕ್ಷುಕಿಯನ್ನು ಕೊಲೆ ಮಾಡಿ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಇಂತಹ ಅಮಾನುಷ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರವೇ ಯುವ ಘಟಕದ ಜಿಲ್ಲಾಧ್ಯಕ್ಷ ವಿ.ವಿನಯ್, ಸಂದೀಪ್, ಆರ್.ಮಂಜುನಾಥ್, ಗೌತಮ್, ಮಲ್ಲೇಶ್ ಮುಂತಾದವರು ಉಪಸ್ಥಿತರಿದ್ದರು.