ಕರ್ನಾಟಕ

karnataka

ETV Bharat / state

ಮಾದಕ ವಸ್ತು ಸಾಗಾಟ, ಮಾರಾಟ ಮಾಡುವವರ ವಿರುದ್ಧ ಸೂಕ್ತ ತನಿಖೆಗೆ ಆಗ್ರಹ

ಮಾದಕ ವಸ್ತು ಮಾರಾಟ ದಂಧೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವ ಜೊತೆಗೆ ಆರೋಪಿಗಳಿಗೆ ಕಾನೂನಿನ ಮೂಲಕ ಸೂಕ್ತ ಶಿಕ್ಷೆ ಕೊಡಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಆಗ್ರಹಿಸಿದೆ.

ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ
ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ

By

Published : Sep 16, 2020, 1:32 PM IST

ಶಿವಮೊಗ್ಗ: ಮಾದಕ ವಸ್ತು ದೇಶದ ಯುವ ಸಂಪತ್ತನ್ನು ಹಾಳು ಮಾಡುತ್ತಿದೆ. ಇಂತಹ ಮಾದಕ ವಸ್ತು ಸಾಗಾಟ, ಮಾರಾಟ ದಂಧೆಯಲ್ಲಿ ಭಾಗಿಯಾಗಿರುವವರ ವಿರುದ್ಧ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಆಗ್ರಹಿಸಿದೆ.

ಮಾದಕ ವಸ್ತು ಸೇವನೆ ಹಾಗೂ ಮಾರಾಟ ನಿಷೇಧ ಮಾಡಲಾಗಿದೆ. ಆದರೆ ಇದನ್ನೇ ಬಂಡವಾಳ ಮಾಡಿ‌ಕೊಂಡು ಕೆಲವರು ಯುವ ಜನತೆಯನ್ನು ಹಾಳು ಮಾಡುತ್ತಿದ್ದಾರೆ. ಇದು ದೇಶದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರುತ್ತದೆ ಎಂದರು.

ಈ ವೇಳೆ ದಂಧೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಕಾನೂನಿನ ಮೂಲಕ ಸೂಕ್ತ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿ, ಅಪರ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details