ಶಿವಮೊಗ್ಗ: ರಾಜ್ಯದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕೋಮುಭಾವನೆ ಕೆರಳಿಸುವಂತಹ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಶಿವಮೊಗ್ಗದಲ್ಲಿ ಆಗ್ರಹಿಸಿದರು. ನಗರದ ಪ್ರೆಸ್ ಟ್ರಸ್ಟ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಆರಗ ಜ್ಞಾನೇಂದ್ರ ಗೃಹ ಸಚಿವರಾದ ಮೇಲೆ ನಮ್ಮ ತೀರ್ಥಹಳ್ಳಿ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಅಂತ ನಾನೇ ಸನ್ಮಾನ ಮಾಡಿದ್ದೆ. ಈಗ ಅವರು ಈ ರೀತಿ ಹೇಳಿಕೆ ನೀಡುವ ಮೂಲಕ ತೀರ್ಥಹಳ್ಳಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ತಕ್ತಪಡಿಸಿದರು.
ಆರಗ ಜ್ಞಾನೇಂದ್ರ ತೀರ್ಥಹಳ್ಳಿಯ ಮಾನ ಮರ್ಯಾದೆ ಕಳೆದರು: ಕಿಮ್ಮನೆ ರತ್ನಾಕರ್ - ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಕಿಮ್ಮನೆ ರತ್ನಾಕರ್ ಒತ್ತಾಯ
ತೀರ್ಥಹಳ್ಳಿ ಕ್ಷೇತ್ರಕ್ಕೆ ಒಂದು ಘನತೆ, ಗೌರವ ಇದೆ. ಜ್ಞಾನೇಂದ್ರ ನಮ್ಮ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.
ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ ಕ್ಷೇತ್ರಕ್ಕೆ ಒಂದು ಘನತೆ, ಗೌರವ ಇದೆ. ಜ್ಞಾನೇಂದ್ರ ನಮ್ಮ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ. ದಯವಿಟ್ಟು ನೀವು ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು. ಬೆಂಗಳೂರಿನಲ್ಲಿ ಹಿಂದೂ ಯುವಕನ ಕೊಲೆ ನಡೆದಾಗ ಅದು ಒಂದು ಕೋಮಿನವರು ಮಾಡಿದ್ದಾರೆ ಎಂದು ಹೇಳಿಕೆ ನೀಡಿ, ನಂತರ ಅದು ಹಾಗಲ್ಲ ಎಂದು ತಮ್ಮ ಹೇಳಿಕೆಯನ್ನೇ ಬದಲಾಯಿಸಿದ್ದರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಇದನ್ನೂಓದಿ:ಮುಸ್ಕಾನ್ ಮುಗ್ಧ ಹುಡುಗಿ.. ಅಲ್ಖೈದಾದಿಂದ ಜನರ ಮುಗ್ಧತೆ ಅಸ್ತ್ರವಾಗಿ ಬಳಕೆ: ಸಚಿವ ಸುಧಾಕರ್