ಕರ್ನಾಟಕ

karnataka

ETV Bharat / state

ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾಯ್ದೆಗಳ ಅರಿವು ಮುಖ್ಯ: ಜಿಪಂ ಸಿಇಒ

ಶಿವಮೊಗ್ಗದಲ್ಲಿ ಪಂಚಾಯತ್​​ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ “ಮಕ್ಕಳ ರಕ್ಷಣಾ ಕಾರ್ಯ ವಿಧಾನಗಳ” ಕುರಿತು 2 ದಿನ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

By

Published : Nov 27, 2019, 5:09 PM IST

children
ಮಕ್ಕಳ ರಕ್ಷಣಾ ಕಾರ್ಯವಿಧಾನಗಳ ಕಾರ್ಯಗಾರ

ಶಿವಮೊಗ್ಗ:ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಮೊದಲು ಕಾಯ್ದೆಗಳ ಅರಿವು ಮುಖ್ಯ ಎಂದು ಜಿಪಂ ಸಿಇಒ ಎಂ.ಎಲ್.ವೈಶಾಲಿ ಹೇಳಿದರು.

ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯಗಳು ಇತ್ತೀಚೆಗೆ ಹೆಚ್ಚುತ್ತಿವೆ. ಅಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಮೊದಲು ಸಂತ್ರಸ್ತ ಮಕ್ಕಳ ರಕ್ಷಣೆಗಿರುವ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವುದು ಮುಖ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಎಂ.ಎಲ್. ವೈಶಾಲಿ ಹೇಳಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಾಲನ್ಯಾಯ ಮಂಡಳಿ ಸಭಾಂಗಣದಲ್ಲಿ ಗ್ರಾಪಂ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು / ಕಾರ್ಯದರ್ಶಿಗಳಿಗೆ “ಮಕ್ಕಳ ರಕ್ಷಣಾ ಕಾರ್ಯ ವಿಧಾನಗಳ” ಕುರಿತು 2 ದಿನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ 78 ಕೇಸ್‍ಗಳು ಬೆಳಕಿಗೆ ಬಂದಿವೆ. ಆದರೆ ಮಕ್ಕಳ ಮೇಲೆ ನಡೆಯುವ ಎಷ್ಟೋ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುವುದಿಲ್ಲ. ಅವುಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಗ್ರಾಮಸಭೆ ಮಾಡುವ ಮೂಲಕ ಪೋಕ್ಸೋ ಕಾಯ್ದೆ-2012, ಬಾಲ ನ್ಯಾಯ ಕಾಯ್ದೆ-2000, ಬಾಲ್ಯ ವಿವಾಹ ಕಾಯ್ದೆ-2006 ಇವುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆ ಇಂತಹ ಕೃತ್ಯಗಳ ನಿರ್ಮೂಲನೆಗೆ ಮುಂದಾಗಬೇಕಿದೆ ಎಂದರು.

For All Latest Updates

ABOUT THE AUTHOR

...view details