ಶಿವಮೊಗ್ಗ:ಜಿಲ್ಲೆಯಲ್ಲಿ ಇಂದು 344 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 15,086 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿಂದು 344 ಜನ ಸೋಂಕಿತರು ಪತ್ತೆ: 326 ಜನ ಗುಣಮುಖ - ಶಿವಮೊಗ್ಗದಲ್ಲಿ ಕೊರೊನಾ ಪ್ರಕರಣ ಏರಿಕೆ ನ್ಯೂಸ್
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇವತ್ತು 326 ಜನ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 4 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಇವತ್ತು 326 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 12,830 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಂದು 4 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 293 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2023 ಜನ ಚಿಕಿತ್ಸೆಯಲ್ಲಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 152 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ 200 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 307 ಸೋಂಕಿತರಿದ್ದಾರೆ. ಮನೆಯಲ್ಲಿ 1212 ಜನ ಐಸೋಲೇಷನ್ನಲ್ಲಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ 152 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ ಸಂಖ್ಯೆ 6490 ಆಗಿವೆ. ಇದರಲ್ಲಿ 3608 ಜೋನ್ ವಿಸ್ತರಣೆಯಾಗಿವೆ.
ತಾಲೂಕುವಾರು ಸೊಂಕಿತರ ಸಂಖ್ಯೆ:
ಶಿವಮೊಗ್ಗ-133
ಭದ್ರಾವತಿ-27
ಶಿಕಾರಿಪುರ-52
ತೀರ್ಥಹಳ್ಳಿ-33
ಸೊರಬ-46
ಸಾಗರ-19
ಹೊಸನಗರ-31
ಬೇರೆ ಜಿಲ್ಲೆಯಿಂದ ಮೂವರು ಸೊಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 4012 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 3627 ಜನರ ವರದಿ ಬಂದಿದೆ.