ಶಿವಮೊಗ್ಗ:ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದ ಗ್ರಾಮೀಣ ಭಾಗದಲ್ಲಿನ ಕೋವಿಡ್ ಪರಿಸ್ಥಿತಿ ಅರಿಯಲು ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಭಾಗಿಯಾಗಿದ್ದರು.
ಗ್ರಾಪಂಗೆ ಹಣ ಬಿಡುಗಡೆ: ಸಿಎಂ BSYಗೆ K.S.ಈಶ್ವರಪ್ಪ ಅಭಿನಂದನೆ - KS Eshwarappa
ಗ್ರಾಮ ಪಂಚಾಯಿತಿಗೆ ಹಣ ಬಿಡುಗಡೆ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಸಿಎಂ ಯಡಿಯೂರಪ್ಪಗೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಈ ವೇಳೆ, ಗ್ರಾಮೀಣ ಭಾಗದಲ್ಲಿ ಕೊರೊನಾ ತಡೆಗೆ ರಚಿಸುವ ಟಾಸ್ಕ್ಪೋರ್ಸ್ ಕುರಿತು ಹಾಗೂ ಕೋವಿಡ್ ಕೇರ್ ಸೆಂಟರ್ ತೆರೆಯುವ ಕುರಿತು ಮಾಹಿತಿ ನೀಡಿದರು. ಟಾಸ್ಕ್ಪೋರ್ಸ್ನಲ್ಲಿ ಸ್ಥಳೀಯವಾಗಿ ಸಂಪನ್ಮೂಲಗಳ ಕ್ರೋಢಿಕರಣ ಹಾಗೂ 15ನೇ ಹಣಕಾಸು ಯೋಜನೆಯಿಂದ ಹಣ ಪಡೆಯುವ ಹಾಗೂ ಗ್ರಾಮ ಪಂಚಾಯಿತಿಗೆ ಕ್ರಿಯಾ ಯೋಜನೆ ರಚನೆ ಅವಕಾಶ ಮಾಡಿರುವ ಕುರಿತು ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಗೆ ಹಣ ಬಿಡುಗಡೆ ಮಾಡಿರುವ ಕುರಿತು ಮಾಹಿತಿ ನೀಡಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಅಲ್ಲದೇ ಕೊರೊನಾವನ್ನು ತೊಲಗಿಸಲು ಸರ್ವ ಪ್ರಯತ್ನ ಮಾಡುತ್ತಿರುವ ಕುರಿತು ತಿಳಿಸಿದರು. ಈ ವೇಳೆ, ಸಿಎಂ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮೀಣ ಭಾಗದ ಸ್ಥಿತಿಗತಿ ತಿಳಿದು ಕೊಂಡರು.