ಶಿವಮೊಗ್ಗ:ಸಿಎಂ ಬದಲಾವಣೆಯಾದ ಬಳಿಕ ಪದೇ ಪದೇ ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂಬುವುದನ್ನು ಪರೋಕ್ಷವಾಗಿ ಹೇಳುತ್ತಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ, ಈಶ್ವರಪ್ಪನವರ ಪುತ್ರ ಕಾಂತೇಶ್ ಅವರು ಪಕ್ಷದ ಕಾರ್ಯಕರ್ತರಿಗೆ ಕಳುಹಿಸಿರುವ ಆಡಿಯೋ ಒಂದು ವೈರಲ್ ಆಗಿದೆ. ಆಡಿಯೋದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಈಶ್ವರಪ್ಪನವರು ಮತ್ತೊಮ್ಮೆ ಸಚಿವರಾಗುತ್ತಿದ್ದಾರೆ. ಮುಖ್ಯಮಂತ್ರಿಗಳು ಇಂದು ಪ್ರಮಾಣವಚನ ಸ್ವೀಕರಿಸಲು ಕರೆ ಮಾಡಿ ಆಹ್ವಾನಿಸಿದ್ದಾರೆ ಎಂದು ಹೇಳಿದ್ದಾರೆ.