ಶಿವಮೊಗ್ಗ:ರಾಜಹಂಸ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದ ಬಳಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಪಲ್ಟಿ: ನಾಲ್ವರು ಪ್ರಯಾಣಿಕರಿಗೆ ಗಾಯ - ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದ ಬಳಿ ರಾಜಹಂಸ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
KSRTC Bus overturned
ಬೆಂಗಳೂರುನಿಂದ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಗೆ ಬಸ್ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗಿನ ಜಾವ ಬಸ್ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸೇರಿದಂತೆ ನಾಲ್ಕು ಜನರು ಗಾಯಗೊಂಡಿದ್ದಾರೆ. ಬಸ್ನಲ್ಲಿ ಒಟ್ಟು 09 ಜನ ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ.
ಇನ್ನೂ ಗಾಯಾಳುಗಳನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.