ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವೀರಭದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 21 ರಿಂದ ಮೇ 04 ರವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಏಪ್ರಿಲ್ 21ರ ನಂತರ ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕುವೆಂಪು ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ - ಕುಲಪತಿ ಪ್ರೊ.ವೀರಭದ್ರಪ್ಪ
ಕೊರೊನಾ ಎರಡನೇ ಅಲೆಯ ಅಟ್ಟಹಾಸ ಮುಂದುವರಿದ ಪರಿಣಾಮ ಕುವೆಂಪು ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ ಎಂದು ವಿವಿಯ ಕುಲಪತಿ ಪ್ರೊ.ವೀರಭದ್ರಪ್ಪ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಕುವೆಂಪು ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ - ಕುಲಪತಿ ಪ್ರೊ.ವೀರಭದ್ರಪ್ಪ
ಇದನ್ನೂ ಓದಿ: ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ
ರಾಜ್ಯ ಸರ್ಕಾರದ ಮಾರ್ಗಸೂಚಿ ಹೊರಬಿದ್ದ ಬಳಿಕ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳು ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ನಿಗದಿಯಾಗಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಎಲ್ಲಾ ವಿಭಾಗಗಳು ಮತ್ತು ಕಾಲೇಜುಗಳಿಗೆ ಅಧಿಕೃತ ಆದೇಶ ರವಾನಿಸಲಾಗುವುದು ಎಂದಿದ್ದಾರೆ.