ಕರ್ನಾಟಕ

karnataka

ETV Bharat / state

ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಮತ್ತೊಮ್ಮೆ ಸ್ಥಾನ ಪಡೆದ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು - Great scientists list

ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಮತ್ತೊಮ್ಮೆ ಸ್ಥಾನ ಪಡೆಯುವ ಮೂಲಕ ಹೆಮ್ಮೆ ತಂದಿದ್ದಾರೆ.

Kuvempu university professors again in the list of great scientists
ಕುವೆಂಪು ವಿಶ್ವವಿದ್ಯಾಲಯ ಪ್ರಾಧ್ಯಾಪಕರು

By

Published : Oct 12, 2022, 4:48 PM IST

Updated : Oct 12, 2022, 5:19 PM IST

ಶಿವಮೊಗ್ಗ: ಅಮೆರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ.ಜೆ. ಗಿರೀಶ್ ಮತ್ತು ಡಾ. ಬಿ.ಇ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.

ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್ಫೋರ್ಡ್ ವಿವಿಯ ಜೆರೋಯಿನ ಬಾಸ್, ಕೆವಿನ್ ಬೋಯಾಕ್ ಮತ್ತು ಡಾ. ಜಾನ್ ಇವೊನ್ನಿಡಿಸ್ ಸಂಶೋಧನಾ ತಂಡವು ವಿಶ್ವದ ಅಗ್ರ ಶೇ. 2 ವಿಜ್ಞಾನಿಗಳ ಡೇಟಾಬೇಸ್ ಅನ್ನು ಅ. 10 ರಂದು ಬಿಡುಗಡೆ ಮಾಡಿದ್ದು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್ - ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವೊಂದನ್ನು ಪ್ರಕಟಿಸಿದ್ದಾರೆ.

ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿಜೀವಮಾನ ಸಾಧಕರು ಮತ್ತು 2022ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ.

2022ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 50,440ನೇ ಸ್ಥಾನ ಪಡೆದಿರುವ ವಿವಿಯ ಗಣಿತವಿಜ್ಞಾನ ಸಹಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳ ಕುರಿತ ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಸತತ ನಾಲ್ಕನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆ ಮಾಡಿದ್ದಾರೆ.

ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಬಿ.ಇ. ಕುಮಾರಸ್ವಾಮಿ 1,63,473ನೇ ಸ್ಥಾನದಲ್ಲಿದ್ದು, ಸತತ ಎರಡನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಈ ವರ್ಷದ ಪಟ್ಟಿಯಲ್ಲಿ ಭಾರತದ ವಿವಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2000 ಕ್ಕೂ ಅಧಿಕ ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ.

ಪಟ್ಟಿಯಲ್ಲಿ ದಾವಣಗೆರೆಯ 6 ವಿಜ್ಞಾನಿಗಳು: ಬಿಡುಗಡೆಗೊಂಡ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಗಣಿತ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಸಿ.ಪ್ರಸನ್ನಕುಮಾರ್‌ ಸೇರಿ ಆರು ಮಂದಿ ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಸಹ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ:ಉದ್ದೇಶಪೂರ್ವಕವಾಗಿ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿದ್ದೇನೆ: ಸಂಸದ ಪ್ರತಾಪ್ ಸಿಂಹ

Last Updated : Oct 12, 2022, 5:19 PM IST

ABOUT THE AUTHOR

...view details