ಶಿವಮೊಗ್ಗ :ಗ್ರಾಮ ಸ್ವರಾಜ್ಯ ಕಲ್ಪನೆಯಡಿ ಕೆರೆಗಳ ಅಭಿವೃದ್ದಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.
ಹೊಸನಗರ ತಾಲೂಕಿನಲ್ಲಿ ಮಳೆಗಾಲದಲ್ಲಿ ಸಾಕಷ್ಟು ಮಳೆಯಾಗುತ್ತದೆ. ಆದರೆ ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುತ್ತದೆ. ಇದರಿಂದ ತಾಲೂಕಿನ ದೊಂಬೆಕೊಪ್ಪದ ಸಾರಾ ಸಂಸ್ಥೆ ಹಾಗೂ ಕೆ.ವಿ.ಸುಬ್ಬಣ್ಣ ರಂಗ ಸಮೂಹದವರು ತಮ್ಮೂರಿನ ಸುತ್ತಮುತ್ತ ಏನಾದರೂ ಮಾಡಬೇಕು ಎಂದು, ಮುತ್ತಲ ಗ್ರಾಮಸ್ಥರ ಸಹಕಾರದಿಂದ ಕೆರೆಯ ಹೂಳನ್ನು ಮೇಲೆತ್ತಿದ್ದಾರೆ.