ಶಿವಮೊಗ್ಗ: ಜಿಂದಾಲ್ ಕಂಪನಿಗೆ 3667 ಎಕರೆ ಜಮೀನನ್ನು ನೀಡಲು ಒಪ್ಪಿಗೆ ಸೂಚಿಸಿರುವ ರಾಜ್ಯ ಸಮ್ಮಿಶ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಜಿಂದಾಲ್ಗೆ ಭೂಮಿ ನೀಡಿದ್ದಕ್ಕೆ ಬಿಜೆಪಿ ಯುವ ಮೋರ್ಚಾ ಆಕ್ರೋಶ, ಪ್ರತಿಭಟನೆ - bjp-protest against Karnataka state govt
ರಾಜ್ಯ ಸರ್ಕಾರವು ಜಿಂದಾಲ್ ಕಂಪನಿಗೆ 3667 ಎಕರೆ ಜಮೀನನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗದಲ್ಲಿ ಪ್ರತಿಭಟನೆ
ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರದಿಂದ ಭೂಮಿ ನೀಡಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಖಾಸಗಿ ಕಂಪನಿಗೆ 3667 ಎಕರೆ ಜಾಗವನ್ನು ಕೊಡುವಂತ ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿರ್ಣಯವನ್ನ ತಕ್ಷಣ ಕೈಬಿಡಬೇಕು, ಕೋಟ್ಯಂತರ ರೂಪಾಯಿ ಬೆಲೆಬಾಳುವ ಭೂಮಿಯನ್ನ ಕಡಿಮೆ ಮೊತ್ತಕ್ಕೆ ಮಾರುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಈ ನಿರ್ಧಾರ ಹಿಂಪಡೆಯದಿದ್ದರೆ, ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.