ಶಿವಮೊಗ್ಗ: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಕೊಡಚಾದ್ರಿ ಬೆಟ್ಟಕ್ಕೆ ತೆರಳುವ ಗೌರಿಕೆರೆ-ಕೊಡಚಾದ್ರಿ ಮಾರ್ಗ ಮಧ್ಯದಲ್ಲಿ ಭೂ ಕುಸಿತ ಉಂಟಾಗಿದೆ.
ಭಾರೀ ಮಳೆಗೆ ಕೊಡಚಾದ್ರಿ-ಗೌರಿಕೆರೆ ಮಾರ್ಗದಲ್ಲಿ ಭೂ ಕುಸಿತ - Landslide at shimog
ಸ್ಥಳೀಯ ಜೀಪ್ ಚಾಲಕರು ಹಾಗೂ ಮಾಲೀಕರ ಸಂಘದಿಂದ ಮಣ್ಣಿನ ತೆರವು ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಭಾರೀ ಮಳೆಗೆ ಕೊಡಚಾದ್ರಿ-ಗೌರಿಕೆರೆ ಮಾರ್ಗದಲ್ಲಿ ಭೂ ಕುಸಿತ
ಕುಸಿತದಿಂದ ಕೊಡಚಾದ್ರಿಗೆ ತೆರಳುವ ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ನಂತರ ಸ್ಥಳೀಯ ಜೀಪ್ ಚಾಲಕರು ಹಾಗೂ ಮಾಲೀಕರ ಸಂಘದಿಂದ ಮಣ್ಣಿನ ತೆರವು ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಮತ್ತೆ ಭೂಮಿ ಕುಸಿಯುವ ಆತಂಕ ಉಂಟಾಗಿದ್ದು, ಸಂಬಂಧಪಟ್ಟ ಇಲಾಖೆ ಇತ್ತ ಗಮನ ಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.