ಶಿವಮೊಗ್ಗ: ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಲಾಠಿ ಚಾರ್ಜ್ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್ - lathi charge at Shimoga
ಬಿ.ಎಚ್.ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ.
ಲಾಠಿ ಚಾರ್ಜ್ ನಡೆಸಿದ ಪೊಲಿಸರು
ಬಿ.ಎಚ್.ರಸ್ತೆ ತಡೆದು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳದಿಂದ ಹೊರಡಲು ತಿಳಿಸಿದ್ದಾರೆ. ಇದಕ್ಕೆ ನಿರಾಕರಿಸಿದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿ ವಶಕ್ಕೆ ಪಡೆಯಲಾಗಿದೆ.
ಭದ್ರತಾ ದೃಷ್ಟಿಯಿಂದ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.