ಕರ್ನಾಟಕ

karnataka

ETV Bharat / state

ಮೊದಲು ಕೇಂದ್ರದಿಂದ ಹಣ ತರಲಿ, ಬಳಿಕ ಬರ ಅಧ್ಯಯನ ನಡೆಸಲಿ : ಬಿಜೆಪಿಗೆ ಸಚಿವ ಮಧು ಬಂಗಾರಪ್ಪ ಟಾಂಗ್ - ಉಚಿತ ವಿದ್ಯುತ್ ಹಾಗೂ ನೀರು

ನಮ್ಮ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಲೇವಡಿ ಮಾಡಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿಕ್ಷಣ ಸಚಿವ ಮಧು ಬಂಗಾರಪ್ಪ

By ETV Bharat Karnataka Team

Published : Nov 3, 2023, 5:23 PM IST

Updated : Nov 3, 2023, 5:43 PM IST

ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ:ಬಿಜೆಪಿಯವರು ಬರ ಅಧ್ಯಯನ ನಡೆಸುವುದನ್ನು ಬಿಟ್ಟು, ರಾಜ್ಯದ ಬರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿ ಹಣ ಬಿಡುಗಡೆ ಮಾಡಿಸಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ಬರ ಅಧ್ಯಯನ ಪ್ರವಾಸದ ವಿರುದ್ದ ಕಿಡಿಕಾರಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಮೊದಲು ಪ್ರತಿಪಕ್ಷ ನಾಯಕ ಯಾರು ಎಂದು ಆಯ್ಕೆ ಮಾಡಲಿ ಎಂದು ತಿರುಗೇಟು ಕೊಟ್ಟರು.

ಮುಂದಿನ 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾರೇ ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ‌ಇದೆ. ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಸಮಾಧಾನ :ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಮಧು ಬಂಗಾರಪ್ಪ ವಿರುದ್ದ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಅವರು, ಇದಕ್ಕೆಲ್ಲಾ ದೆಹಲಿ ನಾಯಕರು ಉತ್ತರ ಕೊಡುತ್ತಾರೆ ಎಂದರು. ನನ್ನ ವಿರುದ್ಧ ಅಸಮಾಧಾನ ಎನ್ನುವುದು ಅದು ಅವರ ಭಾವನೆ. ನನಗೆ ಗೊತ್ತಿಲ್ಲ ಎಂದರು. ಶಾಸಕ ಭೀಮಣ್ಣನಾಯ್ಕ ಅವರನ್ನು ಕರೆದುಕೊಂಡು ಓಡಾಡುತ್ತಾರೆ ಎಂಬ ಆರೋಪ ಮಾಡಿದ್ದಾರೆ. ಇಲ್ಲದಿರುವ ವ್ಯಕ್ತಿಗಳ ಹೆಸರು ಹೇಳುವುದು ಅವರ ಯೋಗ್ಯತೆ ತೋರಿಸುತ್ತದೆ ಎಂದು ಗೋಪಾಲಕೃಷ್ಣ ಬೇಳೂರು ವಿರುದ್ದ ಅಸಮಾಧಾನ ಹೊರ ಹಾಕಿದರು.

ಕಾಂಗ್ರೆಸ್ ಸರ್ಕಾರ ಬೀಳುತ್ತದೆ ಎಂಬ ಬಿಜೆಪಿ ಆರೋಪ ವಿಚಾರ: ನಮ್ಕ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಗಲು ಗನಸು ಕಾಣುತ್ತಿದ್ದಾರೆ. ವ್ಯವಹಾರಿಕವಾಗಿ ಏನಾದರೂ ಆಗ್ತದಾ ಅಂತಾ ಆಸೆ ಇಟ್ಟುಕೊಂಡಿದ್ದಾರೆ. ಅವರ ಯೋಗ್ಯತೆಗೆ ಸರ್ಕಾರ ಬೀಳಿಸೋದು ಇರಲಿ, ವಿಪಕ್ಷ ನಾಯಕನನ್ನು ಮೊದಲು ಆಯ್ಕೆ ಮಾಡಲಿ ನೋಡೋಣ ಎಂದು ಗರಂ ಆದರು. ಬಿಜೆಪಿಯವರಿಗೆ ತಲೆ ಕೆಟ್ಟಿದೆ. ಅವರ ಜೊತೆ ಹೋಗುವವರಿಗೂ ತಲೆ ಕೆಟ್ಟಿದೆ ಎಂದು ಹೇಳಿದರು. ಕೆಇಎ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಹಿಂದೆ ತಪ್ಪು ಆಗಿರುವುದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ:ಕಲಿಕೆಯ ವಿಷಯದಲ್ಲಿ ಭಾವನಾತ್ಮಕ ಲಗಾಮು ಸರಿಯಲ್ಲ: ಸಚಿವ ಮಧು ಬಂಗಾರಪ್ಪ

ಪಂಚ ರಾಜ್ಯಗಳ ಚುನಾವಣೆ ವಿಚಾರ: ಪಂಚರಾಜ್ಯಗಳ ಚುನಾವಣೆಗೆ ನಮಗೂ ಜವಾಬ್ದಾರಿ ವಹಿಸಿದ್ದಾರೆ. ತೆಲಂಗಾಣ ಸೇರಿದಂತೆ ಪಂಚರಾಜ್ಯದ ಚುನಾವಣೆಯಲ್ಲಿ ಪ್ರಚಾರ ನಡೆಸಲು ಪಕ್ಷ ಸೂಚಿಸಿದೆ ಎಂದರು. ಇಲ್ಲಿನ ಕೆಲಸ ಕಾರ್ಯ ನೋಡಿಕೊಂಡು ಪ್ರಚಾರ ನಡೆಸುತ್ತೇನೆ ಎಂದು ಹೇಳಿದರು.

ರಾಜ್ಯದ ಸರ್ಕಾರ ಸರ್ಕಾರಿ ಶಾಲೆಗಳ ಹಳೆ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಿದೆ. ಮುಂದೆ ಉಚಿತ ವಿದ್ಯುತ್ ಹಾಗೂ ನೀರು ಒದಗಿಸಲಿದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ:ಆಪರೇಷನ್ ಕಮಲ ರಾಜ್ಯದಲ್ಲಿ ಸಂಪೂರ್ಣ ವಿಫಲವಾಗಲಿದೆ: ಸಚಿವ ಮಧು ಬಂಗಾರಪ್ಪ

Last Updated : Nov 3, 2023, 5:43 PM IST

ABOUT THE AUTHOR

...view details