ಶಿವಮೊಗ್ಗ:ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರ ನಿರ್ಬಂಧ ಹೇರಿದೆ. ಈ ನಡುವೆ ಬೆಂಗಳೂರು ಸೇರಿದಂತೆ ವಿವಿಧೆಡೆಯ ಪ್ರವಾಸಿಗರು ಜಿಲ್ಲೆಯತ್ತ ಮುಖ ಮಾಡುತ್ತಿದ್ದಾರೆ. ಆದ್ರೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ತಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮವನ್ನು ಬಂದ್ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಕೊರೊನಾ ಭೀತಿ...ಮುನ್ನೆಚ್ಚರಿಕೆ ಕ್ರಮವಾಗಿ ಹುಲಿ- ಸಿಂಹಧಾಮ ಬಂದ್... - ಪ್ರವಾಸಿ ತಾಣ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮವನ್ನು ಬಂದ್
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಭೀತಿಯಿಂದಾಗಿ ಪ್ರಮುಖ ಪ್ರವಾಸಿ ತಾಣ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮವನ್ನು ಬಂದ್ ಮಾಡಲಾಗಿದೆ.
ತ್ಯಾವರೆಕೊಪ್ಪದ ಹುಲಿ- ಸಿಂಹಧಾಮ ಬಂದ್
ಮಾರ್ಚ್ 15 ರಿಂದ 23ರವರೆಗೆ ಹುಲಿ, ಸಿಂಹಧಾಮ ಬಂದ್ ಮಾಡಲಾಗುತ್ತಿದೆ ಎಂದು ಸಫಾರಿಯ ಕಾರ್ಯಕಾರಿ ನಿರ್ವಾಹಕ ಮುಕುಂದ್ ಚಂದ್ರ ತಿಳಿಸಿದ್ದಾರೆ.
ಶಾಲೆ, ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಳ ಆಗಬಹುದು. ಹೊರ ಜಿಲ್ಲೆ, ರಾಜ್ಯದಿಂದಲೂ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮವನ್ನು ಬಂದ್ ಮಾಡಲಾಗುತ್ತದೆ ಎಂದಿದ್ದಾರೆ.