ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ.. ಆರೋಪಿ ಬಂಧನ - ಸಹ ಜೀವನ ನಡೆಸುತ್ತಿದ್ದ ಮಹಿಳೆ

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿ ಮಹಿಳೆಯನ್ನು ಪ್ರಿಯಕರನೇ ಹತ್ಯೆಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Lady murder
ಮಹಿಳೆ ಕೊಲೆ

By ETV Bharat Karnataka Team

Published : Sep 18, 2023, 10:25 PM IST

ಶಿವಮೊಗ್ಗ: ಸಹ ಜೀವನ ನಡೆಸುತ್ತಿದ್ದ ಮಹಿಳೆಯನ್ನು ಪ್ರಿಯಕರನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಿವಾಸಿಯಾದ ರೂಪಾ(30) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಿಂಗೇರ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ರೂಪಾಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇವರು ಇಲ್ಲಿನ ನೀಲಗಿರಿ ತೋಪಿನಲ್ಲಿ ಕಟಾವು ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ರೂಪಾಳಿಗೆ ಸಿಂಗೇರ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸಹಜೀವನ ನಡೆಸುತ್ತಿದ್ದರು. ಇಬ್ಬರು ಜೊತೆಯಾಗಿ ನೀಲಗಿರಿ ತೋಪಿನಲ್ಲಿ ಕೆಲಸ ಮಾಡುತ್ತಿದ್ದರು.

ಸೋಮವಾರ ಬೆಳಗ್ಗೆ ರೂಪಾಳ ಶವ ಸಂಕ್ಲಿಪುರದ ಅಕೇಷಿಯಾ ಪ್ಲಾಂಟೇಶನ್​ ಬಳಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಸಿಂಗೇರ್ ಎಂಬಾತನನ್ನು ವಿಚಾರಣೆ ನಡೆಸಿದಾಗ ಆರೋಪಿ ಕೊಲೆ ಮಾಡಿದ್ದು ಬಯಲಾಗಿದೆ. ಸಿಂಗೇರ್​ ಕೂಡ ಮದುವೆಯಾಗಿದ್ದು, ಈತನ ಹೆಂಡತಿಯೂ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಳು. ಈ ಕುರಿತು ಎಸ್ಪಿ ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಪತ್ನಿಯ ಹತ್ಯೆಗೈದ ಪತಿ :ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೋರ್ವ ತನ್ನ ಪತ್ನಿಯನ್ನೇ ಹತ್ಯೆ ಮಾಡಿದ್ದ ಘಟನೆ ಮಂಡ್ಯ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದಿತ್ತು. ಪಾಂಡವಪುರ ತಾಲೂಕಿನ ಹೊಸಯರಗನಹಳ್ಳಿ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆಗೈದ ಪತಿ, ಬಳಿಕ ಮಗುವಿನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದ. ಬಳಿಕ ಬಂಧನ ಭೀತಿಯಿಂದ ಸ್ಥಳದಿಂದ ಪರಾರಿಯಾಗಿದ್ದ.

ಮೃತ ಮಹಿಳೆಯನ್ನು ವರ್ಷಿತಾ(24) ಎಂದು ಗುರುತಿಸಲಾಗಿತ್ತು. ಆರೋಪಿ ಗೌತಮ್​ ಹತ್ಯೆಗೈದು ಪರಾರಿಯಾಗಿದ್ದ. ಮಾರಣಾಂತಿಕ ಹಲ್ಲೆಯಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ 2 ವರ್ಷದ ಗಂಡು ಮಗುವಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂಬಂಧ ಕೆಆರ್​ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ :ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು‌ ಹಿಡಿಯಲು ಹೋದ ಇಬ್ಬರು ಯುವಕರು‌ ನೀರುಪಾಲು

ABOUT THE AUTHOR

...view details