ಶಿವಮೊಗ್ಗ:ನಗರದಲ್ಲಿ ಕರ್ಫ್ಯೂ ನಿಯಮ ಉಲ್ಲಂಘಿಸಿದವರ ಮೇಲೆ ಒಂದೇ ದಿನ 231 ಪ್ರಕರಣ ದಾಖಲಿಸಲಾಗಿದ್ದು, 165 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಕರ್ಫ್ಯೂ ನಿಯಮ ಉಲ್ಲಂಘನೆ: 165 ವಾಹನ ಜಪ್ತಿ, 231 ಪ್ರಕರಣ ದಾಖಲು - ಶಿವಮೊಗ್ಗ
ಲಾಕ್‌ಡೌನ್ ನಿಯಮವನ್ನು ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ಒಟ್ಟು 165 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ವಾಹನ ಜಪ್ತಿ
ಕೋವಿಡ್ ನಿಯಮ ಮೀರಿದ ಅಂಗಡಿಗಳ ಮಾಲೀಕರ ವಿರುದ್ಧ ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆಕ್ಟ್ ಕಾಯ್ದೆಯ ಅಡಿಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 02, ತುಂಗಾನಗರ ಪೊಲೀಸ್ ಠಾಣೆಯಲ್ಲಿ 01, ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ 03, ಭದ್ರಾವತಿ ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಸೇರಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.
ಐಎಮ್ವಿ (IMV) ಕಾಯ್ದೆ ಅಡಿಯಲ್ಲಿ ಒಟ್ಟು 231 ಪ್ರಕರಣಗಳನ್ನು ದಾಖಲಿಸಿ ರೂ 1,08,600 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.