ಶಿವಮೊಗ್ಗ:ಕೊರೊನಾ 2ನೇ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ- 2020 ಅಡಿಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ 143 ವಾಹನ ಜಪ್ತಿ,₹88 ಸಾವಿರ ದಂಡ ವಸೂಲಿ - police seize 143 vehicles
ಜಿಲ್ಲೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ 143 ವಾಹನಗಳನ್ನು ಜಪ್ತಿ ಮಾಡಿರುವ ಪೊಲೀಸರು 88,500 ರೂ. ದಂಡ ವಸೂಲಿ ಮಾಡಿದ್ದಾರೆ.
ಅನಗತ್ಯ ಸಂಚಾರ: ವಾಹನ ಜಪ್ತಿ
ನಗರದಲ್ಲಿ ಸರ್ಕಾರದ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ 143 ವಾಹನಗಳನ್ನು (130 ದ್ವಿಚಕ್ರ ವಾಹನ, 05 ಆಟೋ ಹಾಗೂ 08 ಕಾರು) ವಶಪಡಿಸಿಕೊಳ್ಳಲಾಗಿದೆ.
ಒಟ್ಟು 180 ಪ್ರಕರಣಗಳನ್ನು ದಾಖಲಿಸಿ 88,500 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.