ಶಿವಮೊಗ್ಗ: ತೈಲ ಬೆಲೆ, ಟೋಲ್ ಶುಲ್ಕ ಹೆಚ್ಚಳ ಖಂಡಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಚಾಲಕರ ಸಂಘ ನೀಡಿದ್ದ ಒಂದು ದಿನದ ಲಾರಿ ಮುಷ್ಕರಕ್ಕೆ ಶಿವಮೊಗ್ಗದಲ್ಲೂ ಬೆಂಬಲ ವ್ಯಕ್ತವಾಗಿದೆ.
ಒಂದು ದಿನದ ಮಟ್ಟಿಗೆ ಸರಕು-ಸಾಗಣೆ ಸ್ಥಗಿತಗೊಳಿಸಿ, ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗದ ಲಾರಿ ಮಾಲೀಕರು ಮತ್ತು ಚಾಲಕರ ಸಂಘದವರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಷ್ಕರದಿಂದಾಗಿ ಶಿವಮೊಗ್ಗ ನಗರದಲ್ಲೇ ಸುಮಾರು 2 ಸಾವಿರಕ್ಕೂ ಅಧಿಕ ಲಾರಿಗಳ ಸಂಚಾರ ಸ್ಥಗಿತವಾಗಿದೆ.
ಬೆಲೆ ಏರಿಕೆ ವಿರುದ್ಧ ಲಾರಿ ಮಾಲೀಕರ ಆಕ್ರೋಶ ಡಿಸೇಲ್, ಪೆಟ್ರೋಲ್ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆಯಾಗಿದೆ. ಟೋಲ್ ಶುಲ್ಕ, ವಿಮೆ ಹಣ ಹಾಗೂ ವಾಹನಗಳ ಬಿಡಿಭಾಗಗಳ ದರ ಕೂಡ ಹೆಚ್ಚಳವಾಗಿದ್ದು, ಲಾರಿ ಮಾಲೀಕರು ಮತ್ತು ಚಾಲಕರ ಮೇಲೆ ಹೊರೆಯಾಗುತ್ತಿದೆ. ಇದರ ಪರಿಣಾಮ ಜನಸಾಮಾನ್ಯರ ಮೇಲೆ ಉಂಟಾಗಿದ್ದು, ತಕ್ಷಣವೇ ತೈಲ ಬೆಲೆ, ಟೋಲ್ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ರಾಜ್ಯಾದ್ಯಂತ ಲಾರಿ ಮುಷ್ಕರ: ತೈಲ ಬೆಲೆ ಇಳಿಕೆಗೆ ಆಗ್ರಹಿಸಿದ ಪ್ರತಿಭಟನಾಕಾರರು